ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಕೊರೊನಾ ನಿಯಮ ಉಲ್ಲಂಘಿಸಿ 'ಕೈ' ಕಾರ್ಯಕರ್ತರಿಂದ ಬೈಕ್ ರ್‍ಯಾಲಿ

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಪ್ರಯುಕ್ತ ಹಮ್ಮಿಕೊಂಡ ಬೈಕ್ ರ್‍ಯಾಲಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಆದೇಶಕ್ಕೆ ಯುವ ಕಾಂಗ್ರೆಸ್ ಕಾರ್ಯಕರ್ತರು ಡೋಂಟ್ ಕೇರ್ ಅಂದ ಘಟನೆ ನಡೆದಿದೆ.

ಮಂಗಳೂರು ವಿಮಾನ ನಿಲ್ದಾಣದಿಂದ ಕುದ್ರೋಳಿ ದೇವಸ್ಥಾನವರೆಗೆ ಬೃಹತ್ ಬೈಕ್ ರ್ಯಾಲಿ ನಡೆದಿದ್ದು ಮಾಸ್ಕ್ ಇಲ್ಲದೇ ಸಾಮಾಜಿಕ ಅಂತರವಿಲ್ಲದೆ ರ್‍ಯಾಲಿಯಲ್ಲಿ 200 ಕ್ಕೂ ಅಧಿಕ ಮಂದಿ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು. ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿವಿ ಶ್ರೀನಿವಾಸ್ ಹಾಗೂ ರಾಜ್ಯ ಯೂತ್ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಸೇರಿದಂತೆ ಹಲವು ಮಂದಿ ರ್ಯಾಲಿಯಲ್ಲಿ ಭಾಗವಹಿಸಿದ್ದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಕೇಸ್ ಗಳು ಜಾಸ್ತಿ ಇರುವ ಹಿನ್ನೆಲೆಯಲ್ಲಿ ಯಾವುದೇ ರ್‍ಯಾಲಿ, ಸಭೆ ಸಮಾರಂಭ ಮಾಡದಂತೆ ನಿರ್ಬಂಧ ಹೇರಲಾಗಿತ್ತು.‌ ಆದರೆ ರಾಜಕೀಯ ಪಕ್ಷಗಳ ನಿರಂತರ ರ್‍ಯಾಲಿ, ಸಭೆ ಸಮಾರಂಭಗಳು ನಡೆಯುತ್ತಿದೆ. ಅದರೆ ಸಾಮಾನ್ಯ ಜನರಿಗೊಂದು ನ್ಯಾಯ, ನಿಮಗೊಂದು ನ್ಯಾಯನಾ ಎಂದು ಜಿಲ್ಲೆಯ ನಾಗರಿಕರು ಪ್ರಶ್ನೆ ಮಾಡುವಂತಾಗಿದೆ.

Edited By : Manjunath H D
Kshetra Samachara

Kshetra Samachara

23/08/2021 03:44 pm

Cinque Terre

19.34 K

Cinque Terre

6