ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರಹ್ಮಾವರ: ಕೋವಿಡ್ 19 ಸೋಂಕಿನಿಂದ ಮೃತಪಟ್ಟ ಕುಟುಂಬಗಳಿಗೆ ಪರಿಹಾರ ಚೆಕ್ ವಿತರಣೆ

ಬ್ರಹ್ಮಾವರ: ಉಡುಪಿ ವಿಧಾನಸಭೆ ಕ್ಷೇತ್ರದ ಬ್ರಹ್ಮಾವರ ತಾಲೂಕು ಪಂಚಾಯತ್ ವ್ಯಾಪ್ತಿಯಲ್ಲಿ ಪ್ರಾಕೃತಿಕ ವಿಕೋಪದಡಿ ಹಾನಿಗೊಳಗಾದವರಿಗೆ ಶಾಸಕ ಕೆ. ರಘುಪತಿ ಭಟ್ ಪರಿಹಾರ ಧನದ ಚೆಕ್ ವಿತರಿಸಿದರು. ಜೊತೆಗೆ ಕೋವಿಡ್ - 19 ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ ಮಂಜೂರಾದ ಪರಿಹಾರ ಧನದ ಚೆಕ್ ನ್ನು ಹಂದಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ವಿತರಿಸಿದರು.

ಪ್ರಾಕೃತಿಕ ವಿಕೋಪದಡಿ ಹಾನಿಗೊಳಗಾದ 74 ಕುಟುಂಬಗಳಿಗೆ ಒಟ್ಟು ರೂ. 38,64,580 ಮೊತ್ತದ ಚೆಕ್ ಹಾಗೂ ಕೋವಿಡ್ - 19 ಸೋಂಕಿನಿಂದ ಮೃತಪಟ್ಟ ಬಿ.ಪಿ.ಎಲ್ ಕುಟುಂಬದ 12 ಕುಟುಂಬಗಳಿಗೆ ಶಾಸಕ ಕೆ. ರಘುಪತಿ ಭಟ್ ವಿತರಿಸಿದರು.

ಈ ಸಂದರ್ಭದಲ್ಲಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ವೀಣಾ ನಾಯ್ಕ್, ಹಂದಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಉದಯ ಪೂಜಾರಿ, ಚಾಂತಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮೀರಾ ಸದಾನಂದ ಪೂಜಾರಿ, ಆರೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಮತಾ ಶೆಟ್ಟಿ, ನೀಲಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಹೇಂದ್ರ ಕುಮಾರ್, ನಾಲ್ಕೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಕಾಶ್ ನಾಯ್ಕ್, ಜಿಲ್ಲಾ ಬಿಜೆಪಿ ಕಾರ್ಯದರ್ಶಿಗಳಾದ ನಳಿನಿ ಪ್ರದೀಪ್ ರಾವ್, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ಜ್ಯೋತಿ ಉದಯ ಪೂಜಾರಿ, ಮಾಜಿ ಉಪಾಧ್ಯಕ್ಷರಾದ ಸುಧೀರ್ ಶೆಟ್ಟಿ, ಮಾಜಿ ಸದಸ್ಯರಾದ ವಸಂತಿ ಬೈಕಾಡಿ ಮತ್ತು ಕಂದಾಯ ನಿರೀಕ್ಷಕರಾದ ಲಕ್ಷ್ಮೀನಾರಾಯಣ ಭಟ್ ಹಾಗೂ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Edited By : Nagesh Gaonkar
Kshetra Samachara

Kshetra Samachara

01/01/2022 08:22 pm

Cinque Terre

10.87 K

Cinque Terre

0

ಸಂಬಂಧಿತ ಸುದ್ದಿ