ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ , ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಇಂದು ಕೋವಿಡ್ ಸೋಂಕು ದೃಢಗೊಂಡಿದೆ.
ಇದು ಎರಡನೇ ಬಾರಿ ಅವರಿಗೆ ಕೋವಿಡ್ ಸೋಂಕು ತಗುಲಿದ್ದು, ಮೊದಲ ಅಲೆಯ ಸಂದರ್ಭದಲ್ಲಿಯೂ ಅವರಿಗೆ ಸೋಂಕು ತಗುಲಿತ್ತು. ಇದೀಗ ಎರಡನೇ ಬಾರಿ ಅವರಿಗೆ ಕೋವಿಡ್ ಸೋಂಕು ತಗುಲಿದೆ.
ತಮ್ಮ ಟ್ವಿಟರ್ ಖಾತೆಯಲ್ಲಿ ಸೋಂಕು ದೃಢಗೊಂಡಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಮೂಲಕ ಅವರು 'ತನಗೆ ಸೋಂಕು ದೃಢಗೊಂಡಿದೆ. ಆದರೆ, ಯಾವುದೇ ಲಕ್ಷಣಗಳಿಲ್ಲ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ತಪಾಸಣೆ ಮಾಡಿಕೊಳ್ಳಿ' ಎಂದು ಹೇಳಿದ್ದಾರೆ.
PublicNext
10/01/2022 03:10 pm