ಪುತ್ತೂರು: ಕಾಂಗ್ರೆಸ್ ರಾಜ್ಯದ ಜನರ ಆರೋಗ್ಯದ ಜತೆ ಚೆಲ್ಲಾಟವಾಡುತ್ತಿದೆ ಎಂದು ಶಾಸಕ ಸಂಜೀವ ಮಠಂದೂರು ಆರೋಪಿಸಿದ್ದಾರೆ.
ಕಾಂಗ್ರೆಸ್ ಮೇಕೆದಾಟು ವಿಚಾರದಲ್ಲಿ ನಡೆಸುತ್ತಿರುವ ಪಾದಯಾತ್ರೆ ಕುರಿತು ಪುತ್ತೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕರು, ಇದು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವೆ ನಡೆಯುತ್ತಿರುವ ಕುರ್ಚಿ ಹೋರಾಟವಾಗಿದ್ದು, ಮೇಕೆದಾಟಿಗೂ ಈ ಪಾದಯಾತ್ರೆಗೂ ಯಾವುದೇ ಸಂಬಂಧವಿಲ್ಲ ಎಂದರು.
ಮುಂದಿನ ವಿಧಾನಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಚುನಾವಣೆ ಗೆಲ್ಲೋದು ಹೇಗೆ, ಗೆದ್ದಲ್ಲಿ ಮುಖ್ಯಮಂತ್ರಿ ಯಾರಾಗಬೇಕು ಎನ್ನುವ ಉದ್ದೇಶವನ್ನಿಟ್ಟುಕೊಂಡು ಈ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ರಾಜ್ಯದಲ್ಲಿ ಕೊರೊನಾ ಹೆಚ್ಚಾಗುತ್ತಿರುವ ಸಮಯದಲ್ಲಿ ಕಾಂಗ್ರೆಸ್ ಪಾದಯಾತ್ರೆ ಮಾಡಿ ಕೊರೊನಾ ಹರಡುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ ಅವರು, ಕಾಂಗ್ರೆಸ್ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಸರಕಾರವನ್ನು ಒತ್ತಾಯಿಸಿದರು.
PublicNext
12/01/2022 12:52 pm