ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಕೊರೊನಾ ಪೀಡಿತ ಬೈಂದೂರು ವಸತಿ ಶಾಲೆಗೆ ಸಚಿವ ಕೋಟ ಭೇಟಿ

ಬೈಂದೂರು: ಬೈಂದೂರು ತಾಲೂಕಿನ ಕಂಬದಕೋಣೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿ ಕೊರೊನಾ ಪೀಡಿತ ಮಕ್ಕಳ ಯೋಗಕ್ಷೇಮ ವಿಚಾರಿಸಿದರು.

ಸುಮಾರು 236 ಮಕ್ಕಳಿರುವ ವಸತಿ ಶಾಲೆಯಲ್ಲಿ 101 ಮಕ್ಕಳಿಗೆ ಕೊರೊನಾ ತಗುಲಿದ ಹಿನ್ನೆಲೆಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತುರ್ತಾಗಿ ಶಾಲೆಗೆ ಭೇಟಿ ನೀಡಿದರು. ಬಳಿಕ ಮಕ್ಕಳೊಂದಿಗೆ ಮಾತನಾಡಿದ ಸಚಿವರು, 'ಯಾರೂ ಧೈರ್ಯಗೆಡುವ ಅಗತ್ಯವಿಲ್ಲ. ಎಲ್ಲ ಅವಶ್ಯಕ ವೈದ್ಯಕೀಯ ಸೌಲಭ್ಯ, ಮೂಲಭೂತ ಸೌಕರ್ಯ ಒದಗಿಸಲಾಗುವುದು' ಎಂದು ಆತ್ಮವಿಶ್ವಾಸ ತುಂಬಿದರು.

ಸಚಿವರೊಂದಿಗೆ ಮಂಡಲ ಬಿಜೆಪಿ ಅಧ್ಯಕ್ಷರಾದ ದೀಪಕ್ ಶೆಟ್ಟಿ, ಮಾಜಿ ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಮಹೇಂದ್ರ ಪೂಜಾರಿ, ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾಧಿಕಾರಿ ದೇವೇಂದ್ರಪ್ಪ ಬಿರಾದರ್, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಖೇಶ್ ಶೆಟ್ಟಿ, ಪಂಚಾಯತ್ ಸದಸ್ಯರಾದ ಉದಯ್ ಕುಮಾರ್ ಶೆಟ್ಟಿ, ಸತೀಶ, ಸುಬ್ರಹ್ಮಣ್ಯ, ರಮೇಶ್, ಗಣೇಶ್ ಅವರು ಆಗಮಿಸಿದ್ದರು.

Edited By : Vijay Kumar
Kshetra Samachara

Kshetra Samachara

29/01/2022 10:50 am

Cinque Terre

6.6 K

Cinque Terre

0

ಸಂಬಂಧಿತ ಸುದ್ದಿ