ಉಡುಪಿ: ಜನರನ್ನು ಮೂರ್ಖರನ್ನಾಗಿಸುತ್ತಿರುವ ಜನಪ್ರತಿನಿಧಿಗಳ ವಿರುದ್ಧ ಮತ್ತು ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜನ್ನು ಸರ್ಕಾರ ಕೂಡಲೇ ಮಂಜೂರು ಮಾಡುವಂತೆ ಆಗ್ರಹಿಸಿ ಉಡುಪಿ ಕರಾವಳಿ ಯೂತ್ ಕ್ಲಬ್ ಸದಸ್ಯರು ಹಾಗೂ ಮನೋವೈದ್ಯ ಡಾ. ಪಿ.ವಿ. ಭಂಡಾರಿ ಅವರು ಏ.1ರಂದು ಮೌನಪಾದಯಾತ್ರೆ ಕೈಗೊಳ್ಳಲಿದ್ದಾರೆ.
ಬೆಳಗ್ಗೆ 8 ಗಂಟೆಗೆ ಮಲ್ಪೆಯ ಗಾಂಧಿ ಪ್ರತಿಮೆ ಬಳಿಯಿಂದ ಪಾದಯಾತ್ರೆ ಆರಂಭಗೊಳ್ಳಲಿದ್ದು, ಮಲ್ಪೆ ಪೊಲೀಸ್ ಠಾಣೆ, ಮಲ್ಪೆ ಬಸ್ ನಿಲ್ದಾಣ, ಕಲ್ಮಾಡಿ, ಆದಿ ಉಡುಪಿ, ಕರಾವಳಿ ಬೈಪಾಸ್, ಬನ್ನಂಜೆ, ಉಡುಪಿ ಸಿಟಿ ಬಸ್ ನಿಲ್ದಾಣ, ಕಲ್ಸಂಕ, ಕುಂಜಿಬೆಟ್ಟು, ಇಂದ್ರಾಳಿ, ಮಣಿಪಾಲ ಸಿಂಡಿಕೇಟ್ ಸರ್ಕಲ್ ಮೂಲಕ ರಜತಾದ್ರಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಸಂಸದರಿಗೆ ಮನವಿ ಸಲ್ಲಿಸಲಿದ್ದಾರೆ.
Kshetra Samachara
31/03/2022 07:07 pm