ಕುಂದಾಪುರ: ಕೊರೋನಾ ಪಾಸಿಟಿವ್ ರೇಟ್ ಗಮನಿಸಿ ವೀಕೆಂಡ್ ಕರ್ಫ್ಯೂ ವಿಧಿಸಲಾಗಿದೆ. ಉನ್ನತ ಮಟ್ಟದಲ್ಲಿ ಈ ಬಗ್ಗೆ ಚರ್ಚೆ ಮಾಡಿ ಪರಿಹಾರ ಕಂಡುಕೊಳ್ಳುತ್ತೇವೆ. ಜನಸಾಮಾನ್ಯರಿಗೆ ಇದರಿಂದ ಸಮಸ್ಯೆಯಾಗುತ್ತದೆ ಎನ್ನುವುದು ಸತ್ಯ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.
ಕುಂದಾಪುರದಲ್ಲಿ ಮಾತನಾಡಿದ ಸಚಿವರು ,ಪಾಸಿಟಿವಿಟಿ ರೇಟ್ ಕಡಿಮೆ ಮಾಡುವ ಜವಾಬ್ದಾರಿ ನಮ್ಮ ಮೇಲಿದೆ.ಆರೋಗ್ಯ ಮಂತ್ರಿಗಳು ಮತ್ತು ಮುಖ್ಯಮಂತ್ರಿಗಳ ಜೊತೆ ಈ ಬಗ್ಗೆ ಚರ್ಚಿಸುತ್ತೇನೆ.ಒಂದೆರಡು ದಿನಗಳಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
Kshetra Samachara
01/09/2021 05:05 pm