ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗಡಿ ಪ್ರವೇಶಿಸುವವರು ಪ್ರತಿ 7 ದಿನಕ್ಕೊಮ್ಮೆ ಕೋವಿಡ್ ನೆಗೆಟಿವ್ ವರದಿ ನೀಡಲಿ: ಸಿಎಂ ಬಸವರಾಜ ಬೊಮ್ಮಾಯಿ

ಮಂಗಳೂರು: ಕೇರಳ ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚಿದ್ದು, ಗಡಿ ದಾಟಿ ದ.ಕ.ಜಿಲ್ಲೆ ಪ್ರವೇಶಿಸುವ ಪ್ರತಿಯೊಬ್ಬರಲ್ಲಿಯೂ ನೆಗೆಟಿವ್ ವರದಿ ಇರಬೇಕು. ಎರಡು ಡೋಸ್ ಕೋವಿಡ್ ವ್ಯಾಕ್ಸಿನ್ ಪಡೆದಿರಬೇಕು. ಅಲ್ಲದೆ ಪ್ರತಿನಿತ್ಯ ಕೆಲಸ ಕಾರ್ಯಗಳಿಗೆಂದು ಗಡಿಯ ನಡುವೆ ಓಡಾಡುತ್ತಿರುವವರು ಪ್ರತಿ 7 ದಿನಕ್ಕೊಮ್ಮೆ ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ವರದಿ ನೀಡಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು‌.

ಬೆಂಗಳೂರಿನ ಸಿಎಂ ಗೃಹ ಕಚೇರಿಯಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ 'ಕೋವಿಡ್-19 ನಿರ್ವಹಣೆ'ಗೆ ಸಂಬಂಧಿಸಿದಂತೆ ಪ್ರಮುಖವಾಗಿ ರೈಲು ನಿಲ್ದಾಣಗಳಲ್ಲಿ ಹೆಚ್ಚಿನ ತಪಾಸಣೆ ನಡೆಸಬೇಕು. ರೈಲು ನಿಲ್ದಾಣಗಳಲ್ಲಿ ಕೋವಿಡ್ ಟೆಸ್ಟ್ ಕೌಂಟರುಗಳ ಸಂಖ್ಯೆಯನ್ನು ಹೆಚ್ಚಳ ಮಾಡಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದರು.

ಕೋವಿಡ್‍ಗೆ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಅತ್ಯಂತ ಅಗತ್ಯವಿರುವ ಪ್ರಾಣವಾಯು ವೈದ್ಯಕೀಯ ಆಮ್ಲಜನಕದ 17 ಘಟಕಗಳು ಜಿಲ್ಲೆಯಲ್ಲಿ ನಿರ್ಮಾಣವಾಗುತ್ತಿದೆ. ಅವುಗಳಲ್ಲಿ ಈಗಾಗಲೇ 8 ಆಮ್ಲಜನಕ ಘಟಕಗಳ ಅನುಷ್ಠಾನ ಕಾರ್ಯ ಪೂರ್ಣಗೊಂಡಿದೆ. ಉಳಿದ ಘಟಕಗಳನ್ನು ಮುಂದಿನ 2 ವಾರಗಳಲ್ಲಿ ಪೂರ್ತಿಗೊಳಿಸಲಾಗುವುದು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ನಿರ್ವಹಣೆ ಸವಾಲಿನ ಕಾರ್ಯವಾಗಿದ್ದು, ಮುಂಬರುವ 15 ದಿನಗಳ ಕಾಲ ಕಠಿಣಾತಿ ಕಠಿಣ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ. ಗಡಿ ಭಾಗಗಳಲ್ಲಿ ಚೆಕ್‌ ಪೋಸ್ಟ್ ತಪಾಸಣೆಯನ್ನು ಮತ್ತಷ್ಟು ತೀವ್ರಗೊಳಿಸಬೇಕು. ಅದಕ್ಕಾಗಿ ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ನಿಯೋಜಿಸುವಂತೆ ಎಂದು ದ‌.ಕ.ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಆಯುಕ್ತರಿಗೆ ನಿರ್ದೇಶನ ಮಾಡಿದರು.

Edited By : Nirmala Aralikatti
Kshetra Samachara

Kshetra Samachara

31/07/2021 09:31 pm

Cinque Terre

24.74 K

Cinque Terre

3

ಸಂಬಂಧಿತ ಸುದ್ದಿ