ಕೋಟ: ನರೇಂದ್ರ ಮೋದಿಯವರು ಈ ದೇಶ ಕಂಡ ಅಪ್ರತಿಮ ಪ್ರಧಾನಮಂತ್ರಿ. ಅವರ ಆಡಳಿತಾವಧಿಯಲ್ಲಿ ನಾವೆಲ್ಲ ಬದುಕುತ್ತಿರುವುದು ಅತ್ಯಂತ ಹೆಮ್ಮೆಯ ವಿಚಾರ ಎಂದು ಕೇಂದ್ರ ಸರಕಾರದ ಕೃಷಿ ಇಲಾಖೆ ಸಹಾಯಕ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.
ಅವರು ಇಂದು ಬಿಜೆಪಿ ಜಿಲ್ಲಾ ಹಾಗೂ ಕುಂದಾಪುರ ಕ್ಷೇತ್ರ ಮಹಿಳಾ ಮೋರ್ಚಾ ಆಶ್ರಯದಲ್ಲಿ ಪ್ರದಾನಿ ನರೇಂದ್ರ ಮೋದಿ ಜನ್ಮದಿನಾಚರಣೆ ಪ್ರಯುಕ್ತ ಕೋಟ ಮಾಂಗಲ್ಯ ಮಂದಿರದಲ್ಲಿ ಜರಗಿದ ಕಣ್ಣಿನ ತಪಾಸಣೆ, ಶಸ್ತ್ರ ಚಿಕಿತ್ಸೆಗೆ ವ್ಯವಸ್ಥೆ ಹಾಗೂ ಉಚಿತ ಕನ್ನಡ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಮಹಿಳೆ ತನ್ನ ಮನೆ-ಸಂಸಾರ ಮುಂತಾದ ಜಂಜಾಟಗಳಿಂದಾಗಿ ಆರೋಗ್ಯದ ಬಗ್ಗೆ ಕಾಳಜಿ ವಹಿಸದೆ ಸಮಸ್ಯೆಗೆ ಒಳಗಾಗುತ್ತಾಳೆ. ಈ ರೀತಿಯಾಗಬಾರದು ಹಾಗೂ ಮಹಿಳಾ ಮೋರ್ಚಾದಿಂದ ಇಂತಹ ಆರೋಗ್ಯ ಸಂಬಂಧಿ ಕಾರ್ಯಕ್ರಮಗಳು ನಡೆದಾಗ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಲು ಸಾಧ್ಯವಾಗುತ್ತದೆ ಎಂದರು. ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಪ್ರಸಾದ್ ನೇತ್ರಾಲಯದ ವೈದ್ಯ ಡಾ| ಶಮಂತ್ ಕಣ್ಣಿನ ಆರೋಗ್ಯ ಕಾಪಾಡುವುದು ಹಾಗೂ ನೇತ್ರ ಸಮಸ್ಯೆ ಬಗ್ಗೆ ತಿಳಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ದ.ಕ. ಜಿಲ್ಲಾ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ಆಹಾರ ನಿಗಮದ ಉಪಾಧ್ಯಕ್ಷ ಕಿರಣ್ ಕೊಡ್ಗಿ, ಪಕ್ಷದ ಪ್ರಮುಖರಾದ ಗುರ್ಮೆ ಸುರೇಶ್ ಶೆಟ್ಟಿ, ಶಿಲ್ಪಾ ಸುವರ್ಣ, ಗೀತಾಂಜಲಿ ಸುವರ್ಣ, ಸದಾನಂದ ಉಪ್ಪಿನಕುದ್ರು, ಶಂಕರ್ ಅಂಕದಕಟ್ಟೆ, ರಶ್ಮಿತಾ ಶೆಟ್ಟಿ, ಕುಂದಾಪುರ ಪುರಸಭೆ ಅಧ್ಯಕ್ಷೆ ವೀಣಾ ಭಾಸ್ಕರ್, ಸಾಲಿಗ್ರಾಮ ಪ.ಪಂ. ಅಧ್ಯಕ್ಷೆ ಸುಲತಾ ಹೆಗ್ಡೆ, ಕೋಟ ಗ್ರಾ.ಪಂ. ಅಧ್ಯಕ್ಷೆ ಅಜಿತ್ ದೇವಾಡಿಗ, ರಾಘವೇಂದ್ರ, ಕೋಟ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸುರೇಶ್ ಕುಂದರ್ ಐರೋಡಿ ಉಪಸ್ಥಿತರಿದ್ದರು.
ಕುಂದಾಪುರ ಕ್ಷೇತ್ರ ಮಹಿಳಾ ಮೋರ್ಚಾ ಅಧ್ಯಕ್ಷೆ ರೂಪ ಪೈ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಅನಿತಾ ಶ್ರೀಧರ್ ಗುಂಡ್ಮಿ ಕಾರ್ಯಕ್ರಮ ನಿರೂಪಿಸಿ, ಸುರಭಿ ಪೈ ವಂದಿಸಿದರು.
Kshetra Samachara
17/09/2021 06:15 pm