ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: "ಪದ್ಮಶ್ರೀ ಸುಕ್ರಿ ಬೊಮ್ಮಗೌಡ ಆಸ್ಪತ್ರೆ ವೆಚ್ಚ ಸರಕಾರವೇ ಭರಿಸಲಿದೆ"

ಮಂಗಳೂರು: ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಇಂದು ನಗರದ ಕೆಎಂಸಿ ಆಸ್ಪತ್ರೆಗೆ ಆಗಮಿಸಿ ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಅವರ ಆರೋಗ್ಯ ವಿಚಾರಿಸಿ, ಆಸ್ಪತ್ರೆಯ ಸಂಪೂರ್ಣ ವೆಚ್ಚವನ್ನು ಸರಕಾರವೇ ಭರಿಸಲಿದೆ ಎಂದು ಭರವಸೆ ನೀಡಿದರು.

ಉಸಿರಾಟದ ತೊಂದರೆ ಹಾಗೂ ಹೃದಯ ಸಂಬಂಧಿ ಕಾಯಿಲೆಯಿಂದ ಸುಕ್ರಿ ಬೊಮ್ಮಗೌಡ ಶಸ್ತ್ರಚಿಕಿತ್ಸೆಗೆ ಒಳಗಾಗಿ ಐಸಿಯುನಲ್ಲಿದ್ದರು. ಇದೀಗ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿರುವ ಹಿನ್ನೆಲೆಯಲ್ಲಿ ಅವರನ್ನು ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ. ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಆರೋಗ್ಯ ವಿಚಾರಿಸಿದರು.

ಬಳಿಕ ಮಾತನಾಡಿದ ಅವರು, ಸಿಎಂ ಬಸವರಾಜ ಬೊಮ್ಮಾಯಿಯವರು ಸುಕ್ರಜ್ಜಿಯ ಆರೋಗ್ಯ ವಿಚಾರಿಸಲು ಹೇಳಿದ್ದರು. ಅದರಂತೆ ಇಂದು ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದೇನೆ. ಸುಕ್ರಜ್ಜಿಯ ಆಸ್ಪತ್ರೆಯ ವೆಚ್ಚವನ್ನು ಸರಕಾರ ಭರಿಸಲಿದೆ.

ಅವರಿಗೆ ಸಕಾಲದಲ್ಲಿ ಚಿಕಿತ್ಸೆ ಸಿಕ್ಕಿರುವುದು ಬಹಳ ಸಂತೋಷ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ನಗುನಗುತ್ತಾ ಮಾತನಾಡಿದ್ದಾರೆ. ಅವರು ಸಂಪೂರ್ಣವಾಗಿ ಚೇತರಿಸಿಕೊಳ್ಳಲಿ ಎನ್ನುವುದು ಸರಕಾರದ ಆಶಯ ಎಂದರು.

Edited By :
PublicNext

PublicNext

11/05/2022 04:52 pm

Cinque Terre

58.84 K

Cinque Terre

1

ಸಂಬಂಧಿತ ಸುದ್ದಿ