ಕೊಲ್ಲೂರು: ಕೊಲ್ಲೂರು ವ್ಯಾಪ್ತಿಯ ಜಡ್ಕಲ್ ಮತ್ತು ಮುದೂರು ಗ್ರಾಮಗಳಲ್ಲಿ ಜನವರಿಯಿಂದ ಡೆಂಘಿ ಪ್ರಕರಣಗಳು ಹೆಚ್ಚುತ್ತಲೇ ಇದ್ದು, 113 ಪ್ರಕರಣಗಳು ವರದಿಯಾಗಿವೆ. ಪ್ರಸ್ತುತ 47 ಸಕ್ರಿಯ ಪ್ರಕರಣಗಳಿವೆ. ಚಿಕಿತ್ಸೆಗಾಗಿ ಕುಂದಾಪುರ ತಾಲೂಕು ಆಸ್ಪತ್ರೆಯಲ್ಲಿ ಒಟ್ಟು 60 ಬೆಡ್‌ಗಳ ವಿಶೇಷ ವಾರ್ಡ್ ತೆರೆಯಲಾಗಿದೆ.
ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಅಂಗಾರ ಅವರು ,ಕೊಲ್ಲೂರು ವ್ಯಾಪ್ತಿಯ ಮುದೂರು ಮತ್ತು ಜಡ್ಕಲ್‌ನ ಡೆಂಘಿ ಪೀಡಿತ ಮನೆಗಳಿಗೆ ಭೇಟಿ ನೀಡಿದರು.
ಮುದೂರು ಮತ್ತು ಜಡ್ಕಲ್ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಡೆಂಘಿ ನಿಯಂತ್ರಿಸಲು ಅಗತ್ಯವಿರುವ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲು ಸಚಿವರು ಸೂಚನೆ ನೀಡಿದರು.
ಆಶಾ-ಆರೋಗ್ಯ ಕಾರ್ಯಕರ್ತರು ಪ್ರತೀ ಮನೆಗೆ ಭೇಟಿ ನೀಡಿ, ಸ್ವಚ್ಛತೆ ಕಾಪಾಡುವ ಮತ್ತು ನೀರು ಶೇಖರಣೆಯಾಗದಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಾಹಿತಿ ನೀಡಬೇಕು. ಸೊಳ್ಳೆ ಪರದೆ ಮತ್ತು ಡಿಎಂಪಿ ತೈಲವನ್ನು ನೀಡುವಂತೆ, ನಿರಂತರ ಫಾಗಿಂಗ್ ಮಾಡುವಂತೆ ಸೂಚಿಸಿದರು. ಶಾಸಕ ಸುಕುಮಾರ ಶೆಟ್ಟಿ ಮತ್ತಿತರರು ಸಚಿವರ ಜೊತೆಗಿದ್ದರು.
Kshetra Samachara
17/05/2022 12:49 pm