ಕುಂದಾಪುರ: ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ ಅವರು ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಡೆಂಘಿ ಯಿಂದ ಚಿಕಿತ್ಸೆ ಪಡೆಯುತ್ತಿರುವವರ ಯೋಗಕ್ಷೇಮ ವಿಚಾರಿಸಿದರು.
ಇಲ್ಲಿ ಚಿಕಿತ್ಸೆಗೆ ಬಂದ ರೋಗಿಗಳನ್ನು ಉಡುಪಿ ಜಿಲ್ಲಾಸ್ಪತ್ರೆಗೆ ಕಳುಹಿಸುತ್ತೀರಿ ಎನ್ನುವ ಆರೋಪವಿದೆ. ಹಾಗೆ ಮಾಡಬೇಡಿ. ಇದು ಸರಕಾರಿ ಆಸ್ಪತ್ರೆ. ಇಲ್ಲಿ ರೋಗಿಗಳಿಗೆ ಸೇವೆ ಸಿಗಬೇಕು. ರೋಗಿಗಳ ಸ್ಥಿತಿ ಗಂಭೀರವಾಗಿದ್ದರೆ, ಆ ಚಿಕಿತ್ಸೆ ಇಲ್ಲಿ ಲಭ್ಯವಿಲ್ಲದಿದ್ದರೆ ಜಿಲ್ಲಾಸ್ಪತ್ರೆಗೆ ಕಳುಹಿಸಬಹುದು. ಅನಗತ್ಯವಾಗಿ ರೋಗಿಗಳನ್ನು ಉಡುಪಿಗೆ ಕಳಿಸಬೇಡಿ ಎಂದು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ಸೂಚಿಸಿದರು.
ಆಸ್ಪತ್ರೆಯಲ್ಲಿ ನೀರಿನ ವ್ಯತ್ಯಯವನ್ನು ಕೂಡಲೇ ಸರಿಪಡಿಸುವಂತೆ ಸೂಚಿಸಿದರು. ಡೆಂಘಿ ಸಂಬಂಧ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಆರೋಗ್ಯ ವಿಚಾರಿಸಿದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕರು, ಜಡ್ಕಲ್ ಮುದೂರು ಭಾಗದಲ್ಲಿ ಕಾಣಿಸಿಕೊಂಡಿದ್ದ ಡೆಂಘಿ ಪ್ರಕರಣದಿಂದ 84 ಮಂದಿ ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದವರು ಚೇತರಿಸಿಕೊಂಡಿದ್ದು, ಈಗ 39 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಡೆಂಘಿ ಈಗ ನಿಯಂತ್ರಣಕ್ಕೆ ಬರುತ್ತಿದೆ ಎಂದರು.
Kshetra Samachara
31/05/2022 03:40 pm