ಬೈಂದೂರು: ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೇಶದ ವಿವಿಧ ಭಾಗಗಳಲ್ಲಿ ಸೇವಾ ಚಟುವಟಿಕೆ ನಡೆಯುತ್ತಿದೆ. ಅಂತೆಯೇ ಬೈಂದೂರು ಮಂಡಲದ ಯುವ ಮೋರ್ಚಾ ವತಿಯಿಂದ ಬೃಹತ್ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಯಿತು. ಶಿಬಿರವನ್ನು ನವೀನ್ ಶೆಟ್ಟಿ ಕುತ್ಯಾರು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉದ್ಘಾಟಿಸಿ ಚಾಲನೆ ನೀಡಿದರು.
ಬೈಂದೂರು ಮಂಡಲ ಬಿಜೆಪಿ ಕ್ಷೇತ್ರಾಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ ಮಾತನಾಡಿ ರಕ್ತದಾನ ಮಾಡುವುದು ಮಹತ್ತರವಾದ ಕಾರ್ಯ. ಪ್ರತಿಯೊಬ್ಬರು ರಕ್ತದಾನ ಮಾಡಿ. ಇನ್ನೂ ನಾಲ್ಕು ಜೀವ ಉಳಿಸುವುದು ನಮ್ಮ ನಿಮ್ಮೆಲ್ಲರ ಕರ್ತವ್ಯ. ವಿಜ್ಞಾನ ಎಷ್ಟೇ ಮುಂದುವರಿದರೂ ರಕ್ತಕ್ಕೆ ಪರ್ಯಾಯ ರಕ್ತವೇ ಹೊರತು ಬೇರೆ ಯಾವುದು ಕೊಡಲು ಸಾಧ್ಯವಿಲ್ಲ. ರಕ್ತದಾನದ ಬಗ್ಗೆ ಎಲ್ಲರಲ್ಲಿಯೂ ಜಾಗೃತಿ ಇನ್ನಷ್ಟು ಹೆಚ್ಚಾಗಬೇಕಿದೆ ಎಂದರು.
ಶಿಬಿರದಲ್ಲಿ 116 ಯೂನಿಟ್ ರಕ್ತ ಸಂಗ್ರಹಿಸಲಾಯಿತು. ಈ ಸಂದರ್ಭ ರಾಜ್ಯ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರಜ್ವಲ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷರಾದ ಉಪ್ಪುಂದ ಆನಂದ್ ಖಾರ್ವಿ, ಜಿಲ್ಲಾ ಕಾರ್ಯದರ್ಶಿ ಪ್ರವೀಣ್ ಶೆಟ್ಟಿ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶರತ್ ಶೆಟ್ಟಿ, ಬೈಂದೂರು ಮಂಡಲ ಉಪಾಧ್ಯಕ್ಷರು ಹಾಗೂ ಸೇವಾ ಪಾಕ್ಷಿಕ ಕಾರ್ಯಕ್ರಮದ ಸಹ ಸಂಚಾಲಕರಾದ ವಿನೋದ್ ಭಂಡಾರಿ, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಪೂಜಾರಿ ಉಪಸ್ಥಿತರಿದ್ದರು.
Kshetra Samachara
22/09/2022 07:01 pm