ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಕೆಎಸ್ಆರ್ಟಿಸಿ ನೌಕರರ ಬೆಂಬಲ

ಮಂಗಳೂರು: ಕೇಂದ್ರ ಹಾಗೂ ರಾಜ್ಯ ಸರಕಾರಗಳ ಕಾರ್ಮಿಕ ಹಾಗೂ ಜನ ವಿರೋಧಿ ನಿಲುವನ್ನ ಖಂಡಿಸಿ ನಡೆದ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಬೆಂಬಲಿಸಿ ನಗರದ ಬಿಜೈ ಕೆಎಸ್ಆರ್ಟಿಸಿ ನಿಲ್ದಾಣ ಮುಂಭಾಗ ಎಐಟಿಯುಸಿ ಫೆಡರೇಶನ್ ವತಿಯಿಂದ ಪ್ರತಿಭಟನೆ ನಡೆಯಿತು.

ಪ್ರತಿಭಟನೆ ಉದ್ದೇಶಿಸಿ ಕೆಎಸ್ಆರ್ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ಯೂನಿಯನ್ ಮಂಗಳೂರು ಇದರ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್ ಮಾತನಾಡಿ, ದೇಶಾದ್ಯಂತ ಕಾರ್ಮಿಕರು ಹಲವು ಬಗೆಯ ಸಮಸ್ಯೆಗಳು ಎದುರಿಸುತ್ತಿದ್ದು, ಕೆಎಸ್ಆರ್ಟಿಸಿ ಯಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗಳು ಕೂಡಾ ಸರಿಯಾದ ಸಮಯಕ್ಕೆ ವೇತನ, ಸಮವಸ್ತ್ರ, ಬ್ಯಾಡ್ಜ್, ನೇಮ್ ಪ್ಲೇಟ್ ನೀಡಬೇಕು.

ಅಲ್ಲದೇ ನೌಕರರನ್ನ ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಬೇಕು ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗೂ ಸರಕಾರವನ್ನ ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಜಯಸಿಂಹ, ಅಬ್ದುಲ್ ಖಾದರ್, ಬಾಲಕೃಷ್ಣ ನಾಯಕ್ ಮತ್ತಿತ್ತರರು ಉಪಸ್ಥಿತರಿದ್ದರು.

Edited By :
Kshetra Samachara

Kshetra Samachara

26/11/2020 08:29 pm

Cinque Terre

16.85 K

Cinque Terre

0

ಸಂಬಂಧಿತ ಸುದ್ದಿ