ಮಂಗಳೂರು: ಪರ್ಸೀನ್ ಬೋಟ್ ದುರಂತದಲ್ಲಿ ಮೃತರಾದ ಆರು ಮಂದಿ ಮೀನುಗಾರರ ಕುಟುಂಬಕ್ಕೆ ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ದಕ್ಷಿಣ ಕನ್ನಡ ಜಿಲ್ಲಾಡಳಿತ ಕಚೇರಿಯಲ್ಲಿ ಗುರುವಾರ ಪರಿಹಾರದ ಚೆಕ್ ವಿತರಿಸಿದರು.
ಒಂದು ಕುಟುಂಬಕ್ಕೆ ತಲಾ 6 ಲಕ್ಷ ರೂ.ನಂತೆ ಒಟ್ಟು 36 ಲಕ್ಷ ರೂ.ನ ಚೆಕ್ ವಿತರಿಸಲಾಯಿತು.
ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ ಕಾಮತ್, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಉಪಸ್ಥಿತರಿದ್ದರು.
Kshetra Samachara
03/12/2020 03:26 pm