ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ದ.ಕ ಜಿಲ್ಲೆಯಲ್ಲಿ ನಾಳೆ ಶಾಂತಿ ಸಭೆ; ಜಿಲ್ಲಾಧಿಕಾರಿ

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಉದ್ವಿಗ್ನದ ವಾತಾವರಣ ಸೃಷ್ಟಿಯಾಗಿರುವುದರಿಂದ ದ.ಕ. ಜಿಲ್ಲೆಯಲ್ಲಿ ನಾಳೆ ಶಾಂತಿ ಸಭೆ ನಡೆಯಲಿದೆ. ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಬೆಳಗ್ಗೆ 11ಗಂಟೆಗೆ ಜಿಲ್ಲಾಧಿಕಾರಿಯವರ ನೇತೃತ್ವದಲ್ಲಿ, ಹಿರಿಯ ಪೊಲೀಸ್ ಅಧಿಕಾರಿಗಳು, ವಿವಿಧ ಧರ್ಮದ, ಸಮುದಾಯದ ಮುಖಂಡರ ಉಪಸ್ಥಿತಿಯಲ್ಲಿ ಈ ಸಭೆ ನಡೆಯಲಿದೆ.

ಈ ಸಂದರ್ಭ ಜಿಲ್ಲೆಯ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎಲ್ಲರಿಂದಲೂ ಸಲಹೆ ಸೂಚನೆಗಳನ್ನು ಪಡೆಯಲಾಗುತ್ತದೆ. ಜಿಲ್ಲಾಡಳಿತದ ಮುಂದಿನ ನಿಯಮ, ಕಾನೂನು ಸುವ್ಯವಸ್ಥೆ ಕಾಪಾಡುವ ಬಗ್ಗೆ, ಕಟ್ಟೆಚ್ಚರ ವಹಿಸುವ ಬಗ್ಗೆಯೂ ಈ ಸಂದರ್ಭ ಸೂಚನೆಗಳನ್ನು ನೀಡಲಾಗುತ್ತದೆ ಎಂದು ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಹೇಳಿದರು.

ಸದ್ಯ 144 ಸೆಕ್ಷನ್ ಜಾರಿ ಮಾಡಲಾಗಿದ್ದು, ಜನರು ಗುಂಪು ಸೇರುವುದಕ್ಕೆ ನಿರ್ಬಂಧ ವಿಧಿಸಲಾಗಿದೆ. ಉದ್ವಿಗ್ನ ಸ್ಥಿತಿಯಿದ್ದರೂ, ಸದ್ಯದ ಮಟ್ಟಿಗೆ ಪರಿಸ್ಥಿತಿ ಶಾಂತವಾಗಿದೆ. ಸರಣಿ ಹತ್ಯೆಯನ್ನು ನಿಲ್ಲಿಸಲು ಪೊಲೀಸ್ ಕಮಿಷನರ್ ಹಾಗೂ ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸರ್ವ ಪ್ರಯತ್ನವನ್ನು ಮಾಡುತ್ತಿದ್ದಾರೆ. ಕೆಎಸ್ಆರ್ ಪಿ ಬೆಟಾಲಿಯನ್ ಜಿಲ್ಲೆಯಲ್ಲಿ ಬೀಡು ಬಿಟ್ಟಿದ್ದು, ಆಯಕಟ್ಟಿನ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಶಾಂತಿ ಸುವ್ಯವಸ್ಥೆ ಕಾಪಾಡಲು ನಾಗರಿಕರ ಸಹಕಾರವೂ ಅತ್ಯಗತ್ಯ. ಹಾಗಾಗಿ ಜನರು ಅನಾವಶ್ಯಕ ತಿರುಗಾಟ ನಡೆಸದಂತೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮನವಿ ಮಾಡಿದರು.

Edited By : Somashekar
Kshetra Samachara

Kshetra Samachara

29/07/2022 07:45 pm

Cinque Terre

14.75 K

Cinque Terre

1