ಚೇರ್ಕಾಡಿ: ಉಡುಪಿ ವಿಧಾನಸಭಾ ಕ್ಷೇತ್ರದ ಚೇರ್ಕಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವಾಸಿ ಪ್ರವೀಣ್ ಶೆಟ್ಟಿ ಎಂಬವರು ಮರ ಬಿದ್ದು ಮೃತಪಟ್ಟಿದ್ದರು.ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ ಧನ ನೀಡುವಂತೆ ಶಾಸಕ ಕೆ. ರಘುಪತಿ ಭಟ್ ಶಿಫಾರಸು ಮಾಡಿದ್ದರು. ಅದರಂತೆ, ಮೃತರ ಮನೆಗೆ ಭೇಟಿ ನೀಡಿದ ಶಾಸಕರು ಮೃತ ಪ್ರವೀಣ್ ಶೆಟ್ಟಿ ತಾಯಿ ಸರೋಜಾ ಅವರಿಗೆ 5 ಲಕ್ಷ ಪರಿಹಾರ ಧನದ ಚೆಕ್ಕನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಚೇರ್ಕಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೇಖಾ ಭಟ್, ಉಪಾಧ್ಯಕ್ಷರಾದ ಕಿಟ್ಟಪ್ಪ ಅಮೀನ್, ಸದಸ್ಯರಾದ ಕಮಲಾಕ್ಷ್ ಹೆಬ್ಬಾರ್, ನಾರಾಯಣ್ ನಾಯ್ಕ್, ಮಧುರ, ಪ್ರಭಾಕರ್, ಸರಿತಾ ಸಂತೋಷ್, ಚೇರ್ಕಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಹರೀಶ್ ಶೆಟ್ಟಿ ಹಾಗೂ ಬ್ರಹ್ಮಾವರ ತಹಶೀಲ್ದಾರರಾದ ರಾಜಶೇಖರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮ ಲೆಕ್ಕಾಧಿಕಾರಿ ಮತ್ತು ಪಕ್ಷದ ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.
Kshetra Samachara
03/09/2021 05:52 pm