ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪ್ರವೀಣ್ ಶೆಟ್ಟಿ ನಿಧನ

ಕಾಪು: ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ಉತ್ತರ ವಲಯ) ಅಧ್ಯಕ್ಷ ಪ್ರವೀಣ್ ಶೆಟ್ಟಿ ಕೊರಂಗ್ರಪಾಡಿ (55) ಅಲ್ಪ ಕಾಲದ ಅಸೌಖ್ಯದಿಂದ ಇಂದು ನಿಧನರಾದರು. ಪ್ರವೀಣ್ ಶೆಟ್ಟಿ ಪ್ರಸಕ್ತ ಕೊರಂಗ್ರಪಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಹಾಗೂ ಅಲೆವೂರು ಗ್ರಾಪಂ ಸದಸ್ಯರಾಗಿಯೂ ಸೇವೆ ಸಲ್ಲಿಸುತ್ತಿದ್ದರು.

ಅವರು ಈ ಹಿಂದೆ ಉಡುಪಿ ತಾಪಂ ಸದಸ್ಯರಾಗಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು‌. ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಭಾನುವಾರ ಬೆಳಿಗ್ಗೆ 9.30ಕ್ಕೆ‌ ಉಡುಪಿ ನಾಯರ್ ಕೆರೆಯ ಕಾಂಗ್ರೆಸ್ ಭವನದಲ್ಲಿ‌ ಅವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗುವುದು.

Edited By : Nirmala Aralikatti
Kshetra Samachara

Kshetra Samachara

25/12/2021 08:48 pm

Cinque Terre

5.65 K

Cinque Terre

2

ಸಂಬಂಧಿತ ಸುದ್ದಿ