ಮೂಡುಬಿದಿರೆ: ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಇಲ್ಲಿನ ಒಂಟಿಕಟ್ಟೆಯ ಕಡಲಕೆರೆ ನಿಸರ್ಗಧಾಮದಲ್ಲಿ ದೋಣಿ ವಿಹಾರವು ಸೋಮವಾರ ಆರಂಭಗೊಂಡಿತು. ಕಡಲಕೆರೆಗೆ 20,000 ವಿವಿಧ ಜಾತಿಯ ಮೀನು ಮರಿಗಳನ್ನು ಸಮರ್ಪಿಸಲಾಯಿತು.
ಶಾಸಕ ಉಮಾನಾಥ ಕೋಟ್ಯಾನ್ ದೋಣಿ ವಿಹಾರಕ್ಕೆ ಚಾಲನೆ ನೀಡಿ, ಕಡಲಕೆರೆಯು ಜನಾಕರ್ಷಣೆಯ ಕೇಂದ್ರವಾಗಿ ರೂಪುಗೊಳ್ಳುತ್ತಿದೆ. ಇದನ್ನು ಹಂತ ಹಂತವಾಗಿ ಅಭಿವೃದ್ಧಿ ಪಡಿಸಲು ಸರ್ಕಾರದಿಂದ ಎಲ್ಲಾ ರೀತಿಯ ಸಹಕಾರವನ್ನು ನೀಡಲಾಗುವುದು ಎಂದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ, ರಾಜ್ಯ ಕ್ರಿಶ್ಚನ್ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಜೋಯ್ಲಸ್ ತಾಕೋಡೆ, ಜಿ.ಪಂ ಸದಸ್ಯ ಕೆ.ಪಿ ಸುಚರಿತ ಶೆಟ್ಟಿ, ಮೂಡಾ ಅಧ್ಯಕ್ಷ ಮೇಘನಾಥ ಶೆಟ್ಟಿ, ಸದಸ್ಯ ಲಕ್ಷ್ಮಣ್ ಪೂಜಾರಿ, ಮಂಜುನಾಥ ರೈ, ಪುರಸಭಾ ಸದಸ್ಯರಾದ ಪಿ.ಕೆ.ಥೋಮಸ್, ನಾಗರಾಜ ಪೂಜಾರಿ, ಪ್ರಸಾದ್ ಕುಮಾರ್, ಸೌಮ್ಯ ಸಂದೀಪ್ ಶೆಟ್ಟಿ, ರೋಟರಿ ಕ್ಲಬ್ ಅಧ್ಯಕ್ಷ ಡಾ.ಸುದೀಪ್, ಮೂಡುಬಿದಿರೆ ರೋಟರಿ ಕ್ಲಬ್ ಟೆಂಪಲ್ ಟೌನ್‍ನ ಅಧ್ಯಕ್ಷ ಬಿ.ಸೀತಾರಾಮ ಆಚಾರ್ಯ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರಶಾಂತ್ ಕುಮಾರ್, ಮಂಗಳೂರು ಮೀನುಗಾರಿಕಾ ಇಲಾಖೆಯ ಉಪನಿರ್ದೇಶಕ ಪಾಶ್ರ್ವನಾಥ, ಪುರಸಭಾ ಮುಖ್ಯಾಧಿಕಾರಿ ಇಂದು ಎಂ., ಕೃಷಿ ವಿಜ್ಞಾನಿ ಡಾ.ಎಲ್.ಸಿ.ಸೋನ್ಸ್, ಹಿರಿಯ ವಕೀಲ ಕೆ.ಆರ್. ಪಂಡಿತ್, ಉಪವಲಯಾರಣ್ಯಾಧಿಕಾರಿಗಳಾದ ಮಂಜುನಾಥ ಗಾಣಿಗ, ಅಶ್ವಿತ್ ಗಟ್ಟಿ, ಪ್ರಿಯಾ ಇನ್ಲೇಂಡ್ ಫಿಶರಿಸ್ ಬೋಟ್ ಸ್ಪೋಟ್ಸ್ ನಿರ್ವಾಹಕ ಡಾ.ಎಂ.ಎಸ್.ನಝೀರ್ ಹಾಗೂ ಗಣ್ಯರು ಉಪಸ್ಥಿತರಿದ್ದರು.
ಅರಣ್ಯ ಇಲಾಖೆ, ರೋಟರಿ ಕ್ಲಬ್, ಮೂಡುಬಿದಿರೆ ರೋಟರಿ ಕ್ಲಬ್ ಆಫ್ ಟೆಂಪಲ್ ಟೌನ್ ಮತ್ತು ಮೀನುಗಾರಿಕಾ ಇಲಾಖೆ ಮಂಗಳೂರು ಇವುಗಳ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಟ್ಲಾ, ಕಾಮನ್ ಕಾರ್ಪ್ (ಗೌರಿ ಮೀನು), ಗ್ರಾಸ್ ಕಾರ್ಕ್ (ಹುಲ್ಲು ಗೆಂಡೆ ಮೀನು)ಗಳನ್ನು ಕೆರೆಗೆ ಸಮರ್ಪಿಸಲಾಯಿತು. ಇದೇ ಸಂದರ್ಭದಲ್ಲಿ ಗಿಡಗಳನ್ನು ನೆಡುವ ಮೂಲಕ ವನಮಹೋತ್ಸವವನ್ನು ಆಚರಿಸಲಾಯಿತು.
Kshetra Samachara
19/10/2020 08:46 pm