ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು ವಿಮಾನ ನಿಲ್ದಾಣ ನಿರ್ವಹಣೆ ಹೊಣೆ ಅದಾನಿಗೆ: ಕಾಂಗ್ರೆಸ್ ಆಕ್ರೋಶ

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ವಹಣೆಯನ್ನು ಅದಾನಿ ಸಂಸ್ಥೆಗೆ ನೀಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕ್ರಮವನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ವಕ್ತಾರ ಮಹಮ್ಮದ್ ಬಡಗನ್ನೂರು ಖಂಡಿಸಿದ್ದಾರೆ.

ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ವಾಣಿಜ್ಯ ಕಾರ್ಯಾಚರಣೆ ಪ್ರಾರಂಭಿಸಲು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅದಾನಿ ಗ್ರೂಪ್‌ಗೆ ಹಸ್ತಾಂತರಿಸುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕ್ರಮ ಮತ್ತು ವಿಜಯ ಬ್ಯಾಂಕ್ ವಿಲೀನಗೊಳಿಸುವ ನಿರ್ಧಾರ ಜಿಲ್ಲೆಯ ಘನತೆಗೆ ಧಕ್ಕೆ ತಂದಿದೆ ಎಂದರು.

ಇನ್ನು ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳಿಂದಾಗಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯು ದೊಡ್ಡ ಸವಾಲನ್ನು ಎದುರಿಸುತ್ತಿದೆ. ಬಿಜೆಪಿ ಆಡಳಿತವು ದಕ್ಷಿಣ ಜಿಲ್ಲೆಯ ಅಸ್ತಿತ್ವಕ್ಕೆ ಧಕ್ಕೆ ತಂದಿದೆ ಎಂದು ಆರೋಪಿಸಿದರು. ಮಂಗಳೂರು ವಿಮಾನ ನಿಲ್ದಾಣವನ್ನು ಅದಾನಿ ಗ್ರೂಪ್‌ಗೆ ಹಸ್ತಾಂತರಿಸುವ ಮೂಲಕ ಕೇಂದ್ರ ಸರ್ಕಾರ ಪರೋಕ್ಷವಾಗಿ ಜರ್ಮನಿಗೆ ವಿಮಾನ ನಿಲ್ದಾಣವನ್ನು ಮಾರಾಟ ಮಾಡಿದೆ.

ಈ ಕ್ರಮದಿಂದಾಗಿ ಹಲವಾರು ಅಂತಾರಾಷ್ಟ್ರೀಯ ಮತ್ತು ರಾಷ್ಟ್ರೀಯ ಪ್ರವಾಸಿಗರು ತೆರಿಗೆಯ ಹೊರೆ ಎದುರಿಸಬೇಕಾಗುತ್ತದೆ. ಮಂಗಳೂರು ಬಂದರನ್ನು ಸಹ ಖಾಸಗೀಕರಣಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಹರಿಹಾಯ್ದರು.

Edited By : Manjunath H D
Kshetra Samachara

Kshetra Samachara

04/11/2020 05:52 pm

Cinque Terre

22.09 K

Cinque Terre

9

ಸಂಬಂಧಿತ ಸುದ್ದಿ