ಮುಲ್ಕಿ: ಮುಲ್ಕಿ- ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ವಿಶೇಷ ಪ್ರಯತ್ನದಿಂದ ಕಟೀಲು ಗ್ರಾಪಂ ವ್ಯಾಪ್ತಿಯ ಕಟೀಲು ನಂದಿನಿ ನದಿ ತಡೆಗೋಡೆ ನಿರ್ಮಾಣಕ್ಕೆ ರಾಜ್ಯ ಸರ್ಕಾರದ ಸಣ್ಣ ನೀರಾವರಿ ಇಲಾಖೆಯಿಂದ 1 ಕೋಟಿ 50 ಲಕ್ಷ ರೂ. ಅನುದಾನ ಬಿಡುಗಡೆಗೊಂಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದರು.
ಈ ಸಂದರ್ಭ ನಳಿನ್ ಮಾತನಾಡಿ, ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಸರಕಾರ ಉತ್ತಮ ಆಡಳಿತ ನಡೆಸುತ್ತಿದ್ದು, ಉಪ ಚುನಾವಣೆಗಳಲ್ಲಿ ಬಿಜೆಪಿ ಜಯಭೇರಿ ಸಾಧಿಸಿದ್ದೇ ಸಾಕ್ಷಿ ಎಂದರು.
ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ, ಮುಂದಿನ ದಿನಗಳಲ್ಲಿ ಮತ್ತಷ್ಟು ಅನುದಾನಗಳ ಮೂಲಕ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮುಲ್ಕಿ-ಮೂಡಬಿದ್ರೆ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲಾಗುವುದು ಎಂದರು. ಜಿಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ, ಧಾರ್ಮಿಕ ಪರಿಷತ್ ಸದಸ್ಯ ಭುವನಾಭಿರಾಮ ಉಡುಪ, ಬಿಜೆಪಿ ಮುಖಂಡರಾದ ಈಶ್ವರ ಕಟೀಲ್, ಕಿರಣ್ ಕುಮಾರ್, ಜನಾರ್ದನ ಕಿಲೆಂಜೂರು, ಗುರುರಾಜ್ ಮಲ್ಲಿಗೆ ಅಂಗಡಿ, ಕೇಶವ ಕರ್ಕೇರ , ಲೋಕೇಶ್ ಕಟೀಲ್ ಮತ್ತಿತರರು ಇದ್ದರು.
Kshetra Samachara
17/11/2020 06:13 pm