ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಣಿಪಾಲ - ಪೆರಂಪಳ್ಳಿ - ಅಂಬಾಗಿಲು ರಸ್ತೆ ಅಗಲೀಕರಣ; ಭೂ ಮಾಲಕರೊಂದಿಗೆ ಶಾಸಕ ಸಭೆ

ಉಡುಪಿ: ಮಣಿಪಾಲ - ಪೆರಂಪಳ್ಳಿ - ಅಂಬಾಗಿಲು ರಸ್ತೆ ಅಗಲೀಕರಣ ಸಂಬಂಧ ಭೂಸ್ವಾಧೀನ ಪಡಿಸಲು ಟಿ.ಡಿ.ಆರ್. ಪ್ರಕ್ರಿಯೆಗೆ ನೋಟಿಫಿಕೇಶನ್ ಆಗಿರುವಂತೆ ಭೂಸ್ವಾಧೀನದ ಬಗ್ಗೆ ಭೂ ಮಾಲಕರೊಂದಿಗೆ ಶಾಸಕ ಕೆ. ರಘುಪತಿ ಭಟ್ ಇಂದು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿದರು.

ಬಳಿಕ ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದಂತೆ ಜಯ ಆಚಾರ್ಯ ಎಂಬವರ ಮನೆಯ ಕಂಪೌಂಡ್ ವಾಲ್ ತೆರವುಗೊಳಿಸಬೇಕಾಗಿರುವುದರಿಂದ ಶಾಸಕ ಕೆ.ರಘುಪತಿ ಭಟ್ ಸ್ಥಳಕ್ಕೆ ಭೇಟಿ ನೀಡಿ ಜಯ ಆಚಾರ್ ಅವರೊಂದಿಗೆ ಚರ್ಚಿಸಿ ಮನವೊಲಿಸಿದರು. ಬಳಿಕ ಕಂಪೌಂಡ್ ವಾಲ್ ತೆರವುಗೊಳಿಸಲು ಆಚಾರ್ ಒಪ್ಪಿಗೆ ನೀಡಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಜಗದೀಶ್ ಭಟ್, ಕಿರಿಯ ಅಭಿಯಂತರರಾದ ಸೋಮನಾಥ್, ನಗರಾಭಿವೃದ್ಧಿ ಪ್ರಾಧಿಕಾರದ ಜಿತೇಶ್ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಪ್ರವೀಣ್ ಶೆಟ್ಟಿ ಕಪ್ಪೆಟ್ಟು,ಸುಮಾ ನಾಯ್ಕ್ ಉಪಸ್ಥಿತರಿದ್ದರು.

Edited By : Nagaraj Tulugeri
Kshetra Samachara

Kshetra Samachara

20/11/2020 05:41 pm

Cinque Terre

21.52 K

Cinque Terre

3

ಸಂಬಂಧಿತ ಸುದ್ದಿ