ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರಿನಲ್ಲಿ 300 ಕೋಟಿ ರೂ. ವೆಚ್ಚದಲ್ಲಿ 400 ಕಿಲೋ ವ್ಯಾಟ್ ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆ

ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ 750 ಮೆಗಾ ವ್ಯಾಟ್ ವಿದ್ಯುತ್ತಿನ ಬೇಡಿಕೆಯಿದ್ದು, ‌ಮುಂದಿನ ದಿನಗಳಲ್ಲಿ 250ಕ್ಕಿಂತಲೂ ಅಧಿಕ ಮೆಗಾ ವ್ಯಾಟ್ ವಿದ್ಯುತ್ ಬೇಡಿಕೆ ಬರಬಹುದು. ಆದ್ದರಿಂದ ಮಂಗಳೂರಿನಲ್ಲಿ 300 ಕೋಟಿ ರೂ. ವೆಚ್ಚದಲ್ಲಿ 400 ಕಿಲೋ ವ್ಯಾಟ್ ವಿದ್ಯುತ್ ಉಪ ಕೇಂದ್ರಗಳನ್ನು ಸ್ಥಾಪಿಸಲಾಗುತ್ತದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಘೋಷಣೆ ಮಾಡಿದ್ದಾರೆ.

ದ.ಕ.ಜಿಲ್ಲಾಡಳಿತದಿಂದ ನಗರದ ನೆಹರೂ ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ಅಮೃತ ಮಹೋತ್ಸವದಲ್ಲಿ ಮಾತನಾಡಿದ ಸಚಿವರು, ಕನಸಿನ ಮಂಗಳೂರು, ಆಕರ್ಷಣೆಯ ಮಂಗಳೂರು ಹಾಗೂ ಅಭಿವೃದ್ಧಿಯ ಹಾದಿಯಲ್ಲಿ ಮಂಗಳೂರು ಎಂಬ ಕಲ್ಪನೆಯಲ್ಲಿ ಮುಂದಿನ ಕೆಲ ವರ್ಷಗಳಲ್ಲಿ ಮಂಗಳೂರನ್ನು ಮುನ್ನಡೆಸಲಾಗುತ್ತದೆ. ಮಂಗಳೂರಿನಲ್ಲಿ ವಿದ್ಯುತ್ ಚಾಲಿತ ಬ್ಯಾಟರಿ ವಾಹನಗಳಿಗೆ ಹೆಚ್ಚಿನ ಬೇಡಿಕೆ ಇರುವುದರಿಂದ 17 ವಿದ್ಯುತ್ ಚಾಲಿತ ವಾಹನಗಳ ಚಾರ್ಜಿಂಗ್ ಸ್ಟೇಷನ್ ಗಳನ್ನು ಸ್ಥಾಪಿಸಲಾಗುತ್ತದೆ ಎಂದು‌ ಹೇಳಿದರು.

ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ‌ ಮಾಡಲು ಸ್ವಚ್ಛ ಭಾರತ ಮಿಷನ್ ನಡಿ ತೆಂಕ ಎಡಪದವು, ಬೆಳ್ತಂಗಡಿ ಉಜಿರೆಯಲ್ಲಿ ಎಂಆರ್ ಎಫ್ ಘಟಕವನ್ನು ಸ್ಥಾಪನೆ ಮಾಡಲಾಗುತ್ತದೆ. ಯಕ್ಷಗಾನಕ್ಕೆ ಪ್ರೋತ್ಸಾಹ ನೀಡಲು ಮಂಗಳೂರಿನಲ್ಲಿ ಅಂತರರಾಷ್ಟ್ರೀಯ ಮಟ್ಟದ ಯಕ್ಷಗಾನ ಸಮ್ಮೇಳನವನ್ನು ಆಯೋಜಿಸಲು ಚಿಂತಿಸಲಾಗಿದೆ. ಈ ಹಿನ್ನೆಲೆಯಲ್ಲಿ 2 ಕೋಟಿ ರೂ. ಅನುದಾನವನ್ನು ಮೀಸಲಿರಿಸಲಾಗಿದೆ ಎಂದರು.

Edited By : Manjunath H D
Kshetra Samachara

Kshetra Samachara

15/08/2022 02:01 pm

Cinque Terre

5.85 K

Cinque Terre

3

ಸಂಬಂಧಿತ ಸುದ್ದಿ