ಮಂಗಳೂರು: ಕರ್ನಾಟಕ ಪಠ್ಯಪುಸ್ತಕ ಪರಿಶೀಲನಾ ಸಮಿತಿಯು 10ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಅಧ್ಯಾಯವನ್ನು ಕೈಬಿಟ್ಟಿರುವುದರಿಂದ ಸಮುದಾಯದ ಇಬ್ಬರು ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಾಜಿ ಸಚಿವ ಬಿ ರಮಾನಾಥ್ ರೈ ಒತ್ತಾಯಿಸಿದ್ದಾರೆ. ಮಂಗಳೂರು ನಗರದ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾನವಕುಲಕ್ಕೆ ಮಾರ್ಗದರ್ಶಕರಾಗಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ ಅಧ್ಯಾಯವನ್ನು 10ನೇ ತರಗತಿಯಿಂದ ಕೈಬಿಟ್ಟಿರುವುದು ಇತರೆ ಹಿಂದುಳಿದ ವರ್ಗಗಳ ಸಮುದಾಯಗಳಿಗೆ ನೋವುಂಟು ಮಾಡಿದೆ. ಅಲ್ಲದೇ ಸಮಾಜಕ್ಕೂ ನೋವುಂಟು ಮಾಡಿದೆ. ಜಿಲ್ಲೆಯಲ್ಲಿ ನಾರಾಯಣ ಗುರುಗಳ ಅಪಾರ ಅನುಯಾಯಿಗಳಿದ್ದಾರೆ. ಅವರ ಮತಗಳನ್ನು ಪಡೆದು ಬಿಜೆಪಿ ಅಧಿಕಾರಕ್ಕೆ ಬಂದಿದೆ. ಈಗ ಅವರನ್ನು ನೆನಪಿಸಿಕೊಳ್ಳುವಲ್ಲಿ ಸರ್ಕಾರ ವಿಫಲವಾಗಿದೆ. ಇಂತಹ ದಾರ್ಶನಿಕರ ಅಧ್ಯಾಯವನ್ನು ಕೈಬಿಡುವ ಮೂಲಕ ಸರಕಾರ ನಿರ್ಲಕ್ಷ್ಯದ ಧೋರಣೆ ತಾಳಿದೆ. ಹೀಗಾಗಿ ಅವಿಭಜಿತ ಜಿಲ್ಲೆಯ ಇಬ್ಬರು ಸಮುದಾಯದ ಸಚಿವರು ರಾಜೀನಾಮೆ ನೀಡಬೇಕು ಎಂದರು.
Kshetra Samachara
20/05/2022 04:30 pm