ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೆಬ್ರಿಯಲ್ಲಿ 32 ಲಕ್ಷ ವೆಚ್ಚದ ಶಾಲಾ ಕಟ್ಟಡ ಉದ್ಘಾಟಿಸಿದ ಸಚಿವ ಸುನಿಲ್ ಕುಮಾರ್

ಹೆಬ್ರಿ: ಇಲ್ಲಿನ ಸೋಮೇಶ್ವರಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 32 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ಶಾಲಾ ಕಟ್ಟಡವನ್ನು ಸಚಿವ ಸುನಿಲ್ ಕುಮಾರ್ ಉದ್ಘಾಟಿಸಿದರು.

ಬಳಿಲ ಮಾತನಾಡಿದ ಇಂಧನ ಮತ್ತು ಕನ್ನಡ ಸಂಸ್ಕೃತಿ ಸಚಿವರು ,ಸರ್ಕಾರಿ ಶಾಲೆಗಳ ಬಲವರ್ಧನೆಗೆ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಗ್ರಾಮೀಣ ಪ್ರದೇಶದ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು.

ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಕರ್ನಾಟಕ ಪಬ್ಲಿಕ್‌ ಸ್ಕೂಲ್‌ ಗಳನ್ನು ಆರಂಭಿಸಲಾಗಿದೆ. ಕಾರ್ಕಳ ಕ್ಷೇತ್ರದಲ್ಲಿ 3 ಪಬ್ಲಿಕ್‌ ಸ್ಕೂಲ್‌ ಗಳನ್ನು ತೆರೆಯಲಾಗಿದ್ದು ಮುನಿಯಾಲಿನ ಕೆಪಿಎಸ್‌ನಲ್ಲಿ 700 ಮಕ್ಕಳು ಸೇರ್ಪಡೆಗೊಂಡಿದ್ದಾರೆ. ಕೆಪಿಎಸ್‌ ಗೆ ಸಕಲ ವ್ಯವಸ್ಥೆಯೊಂದಿಗೆ ಕ್ರೀಡೆ, ಸಂಗೀತ, ಚಿತ್ರಕಲೆ ಸಹಿತ ಅತ್ಯುತ್ತಮ ಗುಣಮಟ್ಟದ ಶಿಕ್ಷಣ ನೀಡಲಾಗುತ್ತದೆ ಎಂದು ಹೇಳಿದರು.

ಇದೇ ವೇಳೆ ಕಟ್ಟಡದ ಗುತ್ತಿಗೆದಾರರಾದ ಹೆರ್ಗ ದಿನಕರ ಶೆಟ್ಟಿ ಮತ್ತು ನಾಡ್ಪಾಲು ಸುಧಾಕರ ಹೆಗ್ಡೆ ಅವರನ್ನು ಸನ್ಮಾನಿಸಲಾಯಿತು.

Edited By : Manjunath H D
Kshetra Samachara

Kshetra Samachara

25/06/2022 02:58 pm

Cinque Terre

3.94 K

Cinque Terre

0

ಸಂಬಂಧಿತ ಸುದ್ದಿ