ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತವಾಗಿಲ್ಲ: ಸುನಿಲ್ ಕುಮಾರ್

ಉಡುಪಿ: ಉಡುಪಿಯಲ್ಲಿ ಇಂಧನ ಸಚಿವ ಸುನಿಲ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ,ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಎಲ್ಲೂ ಸ್ಥಗಿತಗೊಂಡಿಲ್ಲ.ನಮ್ಮ ರಾಜ್ಯಕ್ಕೆ ಕಲ್ಲಿದ್ದಲು ಸರಬರಾಜು ನಿರ್ವಹಣೆ ಚೆನ್ನಾಗಿ ನಡೆಯುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಕೇಂದ್ರ ಸರ್ಕಾರದ ಜೊತೆ ಮಾತುಕತೆ- ಸಮನ್ವಯ ಸಾಧಿಸಿ ಕಲ್ಲಿದ್ದಲು ಪೂರೈಕೆ ಮಾಡಿಕೊಳ್ಳುತ್ತಿದ್ದೇವೆ ಎಂದ ಸುನಿಲ್ ಕುಮಾರ್ ,ಏಪ್ರಿಲ್ ತಿಂಗಳಲ್ಲಿ ರಾಜ್ಯದಲ್ಲಿ ಮಳೆಯಾಗಿರುವುದರಿಂದ ವಿದ್ಯುತ್ ಉತ್ಪಾದನೆ ಮೇಲೆ ಒತ್ತಡ ಕಡಿಮೆಯಾಗಿದೆ. ರಾಜ್ಯಕ್ಕೆ 13 ರಿಂದ 15 ರೇಖ್ ಕಲ್ಲಿದ್ದಲು ಪೂರೈಕೆ ಆಗುತ್ತಿದೆ.

ಮೇ 30 ಬೇಸಿಗೆ ಕಾಲ ಮುಗಿಯುವ ತನಕ ಬರಬಹುದಾದ ಸವಾಲುಗಳನ್ನು ನಿರ್ವಹಣೆ ಮಾಡುತ್ತೇವೆ.ಪ್ರತಿ ಎರಡು ದಿನಕ್ಕೊಂದು ಬಾರಿ ಈ ಬಗ್ಗೆ ಅಧಿಕಾರಿಗಳ ಜೊತೆ ಸಭೆ ಚರ್ಚೆಗಳನ್ನು ಮಾಡುತ್ತಿದ್ದೇವೆ.

ಕಲ್ಲಿದ್ದಲಿನ ಬಳಕೆ ಮತ್ತು ಪೂರೈಕೆಯನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡುತ್ತಿದ್ದೇವೆ.ಕರ್ನಾಟಕದಲ್ಲಿ ವಿದ್ಯುತ್ ಉತ್ಪಾದನೆಗೆ ಕಲ್ಲಿದ್ದಲಿನ ಕೊರತೆಯಾಗದಂತೆ ನಿರ್ವಹಣೆ ಮಾಡುತ್ತೇವೆ ಎಂದು ಹೇಳಿದರು.

Edited By : Manjunath H D
PublicNext

PublicNext

02/05/2022 12:55 pm

Cinque Terre

21.27 K

Cinque Terre

3

ಸಂಬಂಧಿತ ಸುದ್ದಿ