ಮಂಗಳೂರು: ಪೌರಕಾರ್ಮಿಕರನ್ನು ಖಾಯಂಗೊಳಿಸಬೇಕು. ಎನ್‌ಪಿಎಸ್ ರದ್ದು ಮಾಡಿ ಹಳೆಯ ಪಿಂಚಣಿಯನ್ನು ಪೌರ ಕಾರ್ಮಿಕರಿಗೆ ಜಾರಿ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಇಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಎದುರು ಜಿಲ್ಲಾ ಪೌರಕಾರ್ಮಿಕರ ಮತ್ತು ನಾಲ್ಕನೇ ದರ್ಜೆ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಯಿತು. ಸಾಂಕೇತಿಕ ಮುಷ್ಕರ ನಡೆಸಿದ ಸಂಘದ ಮುಖಂಡರು, ಸದಸ್ಯರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದರು. ಒಂದು ತಿಂಗಳೊಳಗೆ ಸಮಸ್ಯೆ ಬಗೆಹರಿಯದಿದ್ದಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಲು ನಿರ್ಧರಿಸಿರುವುದಾಗಿ ಸಂಘದ ಮುಖಂಡರು ತಿಳಿಸಿದ್ದು, ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಪ್ರತಿಭಟನಾ ಸ್ಥಳಕ್ಕಾಗಮಿಸಿ ಮನವಿ ಸ್ವೀಕರಿಸಿದರು.
ಜಿಲ್ಲಾ ಪೌರಕಾರ್ಮಿಕರ ಮತ್ತು ನಾಲ್ಕನೇ ದರ್ಜೆ ನೌಕರರ ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್, ದಲಿತ ಮುಖಂಡರಾದ ಎಸ್.ಪಿ ಆನಂದ, ವಿಶು ಕುಮಾರ್, ಕಮಲಾಕ್ಷ ಮೊದಲಾದವರ ಉಪಸ್ಥಿತಿಯಲ್ಲಿ ಪ್ರತಿಭಟನೆ ನಡೆಯಿತು.
Kshetra Samachara
20/05/2022 08:06 pm