ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: 'ಒಂದು ನೆನಪಿಡಿ ಮಳಲಿ ಮಸೀದಿಯ ಜಾಗದ ಒಂದು ಹಿಡಿ ಮರಳು ನಿಮಗೆ ಸಿಗಲಿಕ್ಕಿಲ್ಲ'‌

ಮಂಗಳೂರು: ಸಂಘ ಪರಿವಾರದ ಚಡ್ಡಿಗಳೇ ಧಂ ಇದ್ರೆ, ತಾಕತ್ತಿದ್ರೆ ಬಳ್ಳಾರಿಯಲ್ಲಿ ನಿಮ್ಮದೇ ನಾಯಕ ಜನಾರ್ದನ ರೆಡ್ಡಿ 200 ವರ್ಷ ಹಳೆಯದಾದ ದೇವಸ್ಥಾನ ಒಡೆದ ಸ್ಥಳದಲ್ಲಿ ತಾಂಬೂಲ ಪ್ರಶ್ನೆ ಕೇಳಿ ಎಂದು ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್‌ ಮಜೀದ್ ಮೈಸೂರು ಸವಾಲ್ ಹಾಕಿದ್ದಾರೆ.

ಮಂಗಳೂರು ನಗರದ ಹೊರವಲಯದ ಕಣ್ಣೂರು ಮೈದಾನದಲ್ಲಿ ನಡೆದ ‘ಬೃಹತ್‌ ಜನಾಧಿಕಾರ ಸಮಾವೇಶದಲ್ಲಿ ಮಾತನಾಡಿದ ಅವರು,

ನಿಮ್ಮ ಗುರು ಬೊಮ್ಮಾಯಿ ಯೂಸುಫ್ ಅಲಿ ಜೊತೆ 2 ಸಾವಿರ ರೂ. ಕೋಟಿ ಒಪ್ಪಂದ ಮಾಡಿದಾಗ ನಾಚಿಕೆಯಾಗಲ್ವಾ ಎಂದು ಲೇವಡಿ ಮಾಡಿದ್ರು. 2006ರ ಸೆಪ್ಟೆಂಬರ್ 3ರಂದು ಬಳ್ಳಾರಿಯ ಸಂಡೂರಿನಲ್ಲಿ 200 ವರ್ಷದ ಹಳೆಯದಾದ ಸುಗ್ಗುಲಮ್ಮ ದೇವಸ್ಥಾನವನ್ನು ಬಾಂಬ್ ಇಟ್ಟು ಒಡೆದು ಹಾಕಿ ದೇವಿಯ ವಿಗ್ರಹ ನಾಶ ಮಾಡಿದ್ದು ನಿಮ್ಮದೇ ಬಿಜೆಪಿ ನಾಯಕ ಜನಾರ್ದನ ರೆಡ್ಡಿ. ಈಗ ನಿಮಗೆ ತಾಕತ್ತಿದ್ದರೆ ತಾಂಬೂಲ ಪ್ರಶ್ನೆ ಕೇಳಿ, ರೆಡ್ಡಿ ಮನೆಗೆ ಪಾದಾಯಾತ್ರೆ ಮಾಡಿ. ಈ ಬಗ್ಗೆ ಬಿಜೆಪಿ ಸಂಸದ ಪ್ರತಾಪ್‌ ಸಿಂಹ ತಮ್ಮ ಬೆತ್ತಲೆ ಪ್ರಪಂಚ ಪುಸ್ತಕದಲ್ಲಿ ಬರೆದಿದ್ದಾರೆ. ಒಂದು ನೆನಪಿಡಿ ಮಳಲಿ ಮಸೀದಿಯ ಜಾಗದ ಒಂದು ಹಿಡಿ ಮರಳು ನಿಮಗೆ ಸಿಗಲಿಕ್ಕಿಲ್ಲ. ಆರ್‌ಎಸ್‌ಎಸ್‌ ಆಟಾಟೋಪಕ್ಕೆ ಕಾಂಗ್ರೆಸ್‌-ಜೆಡಿಎಸ್ ಬೆದರಬಹುದು ನಿಮ್ಮ ಆಟಕ್ಕೆ ಬೆದರುವ ಮಕ್ಕಳು ನಾವಲ್ಲ ಎಂದು ಎಚ್ಚರಿಕೆ ನೀಡಿದರು.

Edited By : Somashekar
Kshetra Samachara

Kshetra Samachara

28/05/2022 12:52 pm

Cinque Terre

12.48 K

Cinque Terre

10

ಸಂಬಂಧಿತ ಸುದ್ದಿ