ಬಂಟ್ವಾಳ: ಇಂದು ಸರ್ಕಾರಿ ಸ್ವಾಮ್ಯದ ಕಂಪನಿ ಮಾರಾಟ ಮಾಡುವ ಕಾರ್ಯ ನಡೆಯುತ್ತಿದೆ. ಇದರಿಂದ ಹಲವರು ತಮ್ಮ ನೌಕರಿಯನ್ನು ಕಳೆದುಕೊಳ್ಳುತ್ತಿದ್ದಾರೆ. ಕಾರ್ಮಿಕರಿಗೆ ಯಾವುದೇ ಸವಲತ್ತುಗಳು ದೊರಕುತ್ತಿಲ್ಲ. ಇದು ಕೇಂದ್ರ ಸರ್ಕಾರ ನಡೆಸುತ್ತಿರುವ ಕಾರ್ಮಿಕ ವಿರೋಧಿ ನೀತಿ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ರು..
ಬಂಟ್ವಾಳ ಬ್ಲಾಕ್ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾರ್ಮಿಕ ಕಾಂಗ್ರೆಸ್ ಘಟಕಗಳ ಆಶ್ರಯದಲ್ಲಿ, ಕೇಂದ್ರ ಹಾಗೂ ರಾಜ್ಯ ಸರಕಾರದ ಜನವಿರೋಧಿ ಕಾರ್ಮಿಕ ನೀತಿಯ ವಿರುದ್ಧ ಬಿ.ಸಿ ರೋಡಿನ ಫ್ಲೈ ಓವರ್ ಅಡಿಯಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು. ಪ್ರತಿಭಟನೆ ನೇತೃತ್ವ ವಹಿಸಿದ್ದ ಮಾಜಿ ಸಚಿವ ರಮಾನಾಥ್ ರೈ ಮಾತನಾಡಿ,ಕೇಂದ್ರ ಸರ್ಕಾರ ಇಂದು ಸೇಡಿನ ರಾಜಕಾರಣ ನಡೆಸುತ್ತಿದ್ದು, ವಿರೋಧಿಸುವವರನ್ನು ಗುರಿಯಾಗಿಟ್ಟು ಅವರ ಮೇಲೆ ಕ್ರಮ ಕೈಗೊಳ್ಳುವ ಕೆಲಸ ಮಾಡುತ್ತಿದೆ ಎಂದು ಆಪಾದಿಸಿದ್ರು.
ಜಿಪಂ ಮಾಜಿ ಸದಸ್ಯರಾದ ಎಂ.ಎಸ್.ಮಹಮ್ಮದ್, ಚಂದ್ರಪ್ರಕಾಶ್ ಶೆಟ್ಟಿ, ಬುಡಾ ಮಾಜಿ ಅಧ್ಯಕ್ಷರಾದ ಪಿಯೂಸ್ ಎಲ್. ರೋಡ್ರಿಗಸ್, ಸದಾಶಿವ ಬಂಗೇರ, ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಲಾರೆನ್ಸ್ ಮುಖಂಡರಾದ ಪಿ.ಎ.ರಹೀಂ, ಬಿ.ಎಂ.ಅಬ್ಬಾಸ್ ಆಲಿ ಮಾತನಾಡಿ, ಕೇಂದ್ರ ಸರ್ಕಾರದ ವರ್ತನೆಯನ್ನು ಕಟುವಾಗಿ ಟೀಕಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ತಾಪಂ ಮಾಜಿ ಅಧ್ಯಕ್ಷರಾದ ಪದ್ಮನಾಭ ರೈ, ಪುರಸಭೆ ಉಪಾಧ್ಯಕ್ಷೆ ಜೆಸಿಂತಾ ಡಿಸೋಜ, ಕಿಸಾನ್ ಘಟಕದ ಜಿಲ್ಲಾಧ್ಯಕ್ಷ ಮೋಹನ ಗೌಡ ಕಲ್ಮಂಜ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು.
Kshetra Samachara
15/06/2022 03:18 pm