ಬಂಟ್ವಾಳ: ಗುಡ್ಡ ಜರಿದು ಶೆಡ್ ನೊಳಗೆ ಸಿಲುಕಿದ್ದ ರಬ್ಬರ್ ಟ್ಯಾಪಿಂಗ್ ಕಾರ್ಮಿಕರು ಮೃತಪಟ್ಟ ಪಂಜಿಕಲ್ಲು ಗ್ರಾಮದ ಸ್ಥಳಕ್ಕೆ ಸಚಿವ ಸುನಿಲ್ ಕುಮಾರ್ ಹಾಗೂ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೇಟಿ ನೀಡಿದರು.
ಈ ಸಂದರ್ಭ ಮಾಧ್ಯಮದ ಜೊತೆ ಮಾತನಾಡಿದ ಸಚಿವರು, ನಾಲ್ವರು ಕಾರ್ಮಿಕರ ಪೈಕಿ ಓರ್ವನನ್ನು ಮಾತ್ರ ಉಳಿಸಿಕೊಳ್ಳಲು ಸಾಧ್ಯವಾಯಿತು. ನಾಲ್ವರು ಕಾರ್ಮಿಕರು ಕೂಡ ಕೇರಳದವರು. ಪೂರ್ಣ ವರದಿ ಬಂದ ನಂತರ ಸರಕಾರದ ಮಟ್ಟದಲ್ಲಿ ಸಾಧ್ಯವಿರುವ ಪರಿಹಾರ ನೀಡುತ್ತೇವೆ ಎಂದರು.
ಮಂಗಳೂರು- ಉಡುಪಿ ಭಾಗದಲ್ಲಿ4 ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ದೊಡ್ಡ ಮಟ್ಟದ ನಷ್ಟವಾಗಿದೆ. ನಾನಾ ಕಡೆಯೂ ಪ್ರಾಕೃತಿಕ ವಿಕೋಪ ಉಂಟಾಗಿದ್ದು, ಈ ಎಲ್ಲಾ ಪ್ರದೇಶಗಳಿಗೆ ಸಚಿವರು, ಇತರ ಜನಪ್ರತಿನಿಧಿಗಳು, ಅಧಿಕಾರಿಗಳು ಭೇಟಿ ನೀಡಿ ಪರಿಹಾರ ಕಾರ್ಯ ಕೈಗೊಳ್ಳಲಿದ್ದೇವೆ ಎಂದು ಹೇಳಿದರು.
*ಇಂದು ತುರ್ತು ಸಭೆ: ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿ ಹಾಗೂ ಮುಂಜಾಗೃತಾ ಕ್ರಮವಾಗಿ ಇಂದು ಸಂಜೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ತುರ್ತು ಸಭೆ ಕರೆಯಲಾಗಿದೆ. ಮುಂದಿನ 48 ಗಂಟೆಯಲ್ಲಿ ಬರಬಹುದಾದ ಮಳೆ ಪ್ರಮಾಣ ಅಂದಾಜು ಮಾಡಿಕೊಂಡು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದು ಸಚಿವರು ತಿಳಿಸಿದರು.
ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ತಹಶೀಲ್ದಾರ್ ಸ್ಮಿತಾ ರಾಮು , ಎಸ್ ಪಿ ಹೃಷಿಕೇಶ್ ಸೋನಾವಣೆ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್, ಎಸ್ಐ ಹರೀಶ್, ಪಿಡಿಒ ವಿದ್ಯಾಶಿವಾನಂದ, ಕಂದಾಯ ನಿರೀಕ್ಷಕ ಸಂತೋಷ್, ಗ್ರಾಮಕರಣಿಕ ಕುಮಾರ್, ಪಂಚಾಯತ್ ಅಧ್ಯಕ್ಷ ಸಂಜೀವ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
07/07/2022 02:26 pm