ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುಳ್ಯ: ರಸ್ತೆಗಳ ಅಭಿವೃದ್ಧಿಗೆ ಸಚಿವ ಅಂಗಾರ ನೇತೃತ್ವದಲ್ಲಿ ಲೋಕೋಪಯೋಗಿ ಸಚಿವರಿಗೆ ಮನವಿ

ಸುಳ್ಯ: ಸುಳ್ಯ ಕ್ಷೇತ್ರದ ಲೋಕೋಪಯೋಗಿ ರಸ್ತೆಗಳ ಅಭಿವೃದ್ಧಿಗೆ ಅನುದಾನ ಒದಗಿಸಬೇಕು ಎಂದು ಬಂದರು, ಮೀನುಗಾರಿಕೆ ಮತ್ತು ಒಳನಾಡು ಸಚಿವ ಎಸ್. ಅಂಗಾರರ ನೇತೃತ್ವದಲ್ಲಿ ಬಿಜೆಪಿ ನಿಯೋಗ

ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ ಪಾಟೀಲ್ ಅವರಿಗೆ ಮನವಿ ಸಲ್ಲಿಸಲಾಯಿತು. ಅವರ ವಿಕಾಸ ಸೌಧದ ಕಛೇರಿಯಲ್ಲಿ ಸಚಿವ ಅಂಗಾರ ನೇತೃತ್ವದಲ್ಲಿ ಭೇಟಿಯಾಗಿ ಸುಳ್ಯ ಕ್ಷೇತ್ರದಲ್ಲಿ ವಿವಿಧ ರಸ್ತೆಗಳ ಅಭಿವೃದ್ಧಿಗೆ, ಹಾಗೂ ನೆರೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳ ಮೂಲಭೂತ ವ್ಯವಸ್ಥೆಗಳನ್ನು ಅಭಿವೃದ್ಧಿ ಪಡಿಸಲು ಅನುದಾನ ನೀಡುವಂತೆ ಮನವಿ ಸಲ್ಲಿಸಿ ಹಾನಿಗಳ ಗಂಭೀರತೆಯ ಬಗ್ಗೆ ಮನವರಿಕೆ ಮಾಡಲಾಯಿತು ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ. ಈ ಸಂದರ್ಭದಲ್ಲಿ ಮೀನುಗಾರಿಕಾ ನಿಗಮದ ಅಧ್ಯಕ್ಷ ಎ.ವಿ ತೀರ್ಥರಾಮ, ಬಿಜೆಪಿ ಸುಳ್ಯ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ ಇದ್ದರು.

Edited By : Nagaraj Tulugeri
Kshetra Samachara

Kshetra Samachara

18/08/2022 05:57 pm

Cinque Terre

8.16 K

Cinque Terre

2

ಸಂಬಂಧಿತ ಸುದ್ದಿ