ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ: ಸರ್ಕಾರಿ ಆಸ್ಪತ್ರೆಯಲ್ಲಿ 1.67 ಕೋಟಿ ರೂ. ವೆಚ್ಚದ ಐಸಿಯು ಘಟಕ ಉದ್ಘಾಟನೆ

ಬಂಟ್ವಾಳ: ಬಂಟ್ವಾಳ ಸರ್ಕಾರಿ ತಾಲೂಕು ಆಸ್ಪತ್ರೆಗೆ 1.67 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣ ಮಾಡಲಾದ 22 ಹಾಸಿಗೆಗಳು ಇರುವ ಐಸಿಯು ಘಟಕವನ್ನು ಸಂಸದ ನಳಿನ್ ಕುಮಾರ್ ಕಟೀಲ್ ಲೋಕಾರ್ಪಣೆ ಮಾಡಿದರು.

ಗ್ರಾಮೀಣ ಭಾಗದ ಬಡವರಿಗೆ ಅನುಕೂಲವಾಗುವಂತೆ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವ ಕೆಲಸ ಮಾಡಲಾಗಿದೆ. ಇಚ್ಛಾಶಕ್ತಿ ಇದ್ದಾಗ ಸರಕಾರಿ ಆಸ್ಪತ್ರೆಯನ್ನು ಯಾವ ರೀತಿಯಲ್ಲಿ ಗುಣಮಟ್ಟದ ಆಸ್ಪತ್ರೆಯಾಗಿ ಬದಲಾವಣೆ ಮಾಡಬಹುದು ಎಂಬುದಕ್ಕೆ ಇದು ಸಾಕ್ಷಿಯಾಗಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಅವರನ್ನು ಸಂಸದರು ಶ್ಲಾಘಿಸಿದರು. ತಾಲೂಕು ಮಟ್ಟದ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸುವ ಯೋಜನೆಯನ್ನು ಕೇಂದ್ರ ಸರಕಾರ ಮಾಡುತ್ತಿದೆ ಎಂದವರು ಹೇಳಿದರು.

ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಮಾತನಾಡಿ ಬಂಟ್ವಾಳ ತಾಲೂಕು ಆರೋಗ್ಯ ಕೇಂದ್ರವನ್ನು ಸುಸಜ್ಜಿತ ರೀತಿಯಲ್ಲಿ ನಿರ್ಮಾಣ ಮಾಡಿದ್ದೇವೆ. ಆರೋಗ್ಯ ಇಲಾಖೆಯ ಸಮಿತಿ ಹಾಗೂ ವೈದ್ಯರ ಸಹಕಾರದಿಂದ ಆಸ್ಪತ್ರೆಯ ಅಭಿವೃದ್ಧಿಗೆ ಕಾರಣವಾಯಿತು ಎಂದು ಹೇಳಿದರು.

Edited By :
Kshetra Samachara

Kshetra Samachara

24/06/2022 07:16 pm

Cinque Terre

7.29 K

Cinque Terre

0

ಸಂಬಂಧಿತ ಸುದ್ದಿ