ಮುಲ್ಕಿ: ಭಾರತೀಯ ಜನತಾ ಪಾರ್ಟಿ ಮುಲ್ಕಿ ಶಕ್ತಿ ಕೇಂದ್ರದ ವತಿಯಿಂದಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಸೇವಾ ಪಾಕ್ಷಿಕ ಕಾರ್ಯಕ್ರಮದಡಿ ಮುಲ್ಕಿ ಸರಕಾರಿ ಆಸ್ಪತ್ರೆಯ ಒಳ ಹಾಗು ಹೊರರೋಗಿಗಳಿಗೆ ಶಾಸಕ ಉಮಾನಾಥ ಕೋಟ್ಯಾನ್ ನೇತೃತ್ವದಲ್ಲಿ ಹಣ್ಣು ಹಂಪಲು ಬಟ್ಟೆ ಬರೆ ವಿತರಿಸಲಾಯಿತು.
ಈ ಸಂದರ್ಭ ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ ಪ್ರಧಾನಮಂತ್ರಿಯವರ ಕನಸಿನಂತೆ ಸಮಾಜದಲ್ಲಿ ಕಟ್ಟ ಕಡೆಯ ವ್ಯಕ್ತಿಗೆ ನ್ಯಾಯ ದೊರಕಿಸುವ ಕಾರ್ಯ ನಡೆಯುತ್ತಿದೆ ಎಂದರು.
ಮುಲ್ಕಿ ನಪಂ ಅಧ್ಯಕ್ಷ ಸುಭಾಷ್ ಶೆಟ್ಟಿ, ಮಾಜೀ ಅಧ್ಯಕ್ಷ ಸುನಿಲ್ ಆಳ್ವ, ಉಪಾಧ್ಯಕ್ಷ ಸತೀಶ್ ಅಂಚನ್, ಸದಸ್ಯರಾದ ಹರ್ಷರಾಜ ಶೆಟ್ಟಿ, ಶೈಲೇಶ್ ಕುಮಾರ್, ದಯಾವತಿ ಅಂಚನ್, ರಾಧಿಕಾ ಕೋಟ್ಯಾನ್, ಶಾಂತ ಕಿರೋಡಿಯನ್, ನರಸಿಂಹ ಪೂಜಾರಿ, ಸಂತೋಷ್ ದೇಸುಣಿಗಿ, ಈರಣ್ಣ, ಬಿಜೆಪಿ ನಾಯಕರಾದ ಹರಿಶ್ಚಂದ್ರ ಕೆಎಸ್ ರಾವ್ ನಗರ, ವಿನೋದ್ ಸಾಲ್ಯಾನ್, ದೇವಪ್ರಸಾದ್ ಪುನರೂರು, ಶ್ಯಾಮ್ ಪ್ರಸಾದ್ ಪಡುಪಣಂಬೂರು ಮತ್ತಿತರರು ಉಪಸ್ಥಿತರಿದ್ದರು.
Kshetra Samachara
17/09/2022 12:19 pm