ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಇಎಸ್‌ಐ ಆಸ್ಪತ್ರೆಯನ್ನ ಮೇಲ್ದರ್ಜೆಗೇರಿಸಲು ಕೇಂದ್ರ ಸಚಿವರಿಗೆ ಶಾಸಕ ವೇದವ್ಯಾಸ್ ಮನವಿ

ಮಂಗಳೂರು: ನಗರದ ಇ.ಎಸ್.ಐ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಕುರಿತು ಶಾಸಕ ವೇದವ್ಯಾಸ್ ಕಾಮತ್ ಅವರು ಕೇಂದ್ರ ಉದ್ಯೋಗ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ರಾಜ್ಯ ಸಚಿವರಾದ ರಾಮೇಶ್ವರ ತೇಲಿ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಕೇಂದ್ರ ಸಚಿವರ ಮಂಗಳೂರು ಭೇಟಿಯ ಸಂದರ್ಭದಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಸಚಿವರನ್ನು ಭೇಟಿ ಮಾಡಿ ಈ ಕುರಿತು ಮನವಿ‌ ಸಲ್ಲಿಸಿದ್ದು, ಇ.ಎಸ್.ಐ ಆಸ್ಪತ್ರೆಯನ್ನು ಸಂಪೂರ್ಣವಾಗಿ ಮೇಲ್ದರ್ಜೆಗೇರಿಸುವ ದೃಷ್ಟಿಯಿಂದ ಸಹಕಾರ ನೀಡಬೇಕೆಂದು ಮನವಿ ಮಾಡಿಕೊಂಡರು.

ಈ ಕುರಿತು ಮಾತನಾಡಿದ ಅವರು, ನಗರದಲ್ಲಿರುವ ಇ.ಎಸ್.ಐ ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಕೊರತೆ, ವೈದ್ಯಕೀಯ ಉಪಕರಣಗಳ ಕೊರತೆಯಿರುವ ಕಾರಣದಿಂದ ರೋಗಿಗಳನ್ನು ಖಾಸಗಿ ಆಸ್ಪತ್ರೆಗಳಿಗೆ ಕಳುಹಿಸಲಾಗುತ್ತಿದೆ. ಆ ವೆಚ್ಚವನ್ನು ಇ.ಎಸ್.ಐ ಆಸ್ಪತ್ರೆಯ ಮೂಲಕ ಭರಿಸಲಾಗುತ್ತಿದೆ. ಆಸ್ಪತ್ರೆಯ ಸಂಪೂರ್ಣ ಅಭಿವೃದ್ಧಿಯಿಂದ ನಾಗರಿಕರಿಗೂ ಉತ್ತಮ ಸೌಲಭ್ಯ ನೀಡಬಹುದಾಗಿದ್ದು, ಆ ನಿಟ್ಟಿನಲ್ಲಿ ಸಚಿವರ ಗಮನಕ್ಕೆ ತರಲಾಗಿದೆ ಎಂದರು.

Edited By : Vijay Kumar
Kshetra Samachara

Kshetra Samachara

10/10/2022 09:44 am

Cinque Terre

6.02 K

Cinque Terre

0

ಸಂಬಂಧಿತ ಸುದ್ದಿ