ಪುತ್ತೂರು: ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರ ಮೇಲೆ ಬಿಜೆಪಿ ಸರಕಾರ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿಇಂದು ಪ್ರತಿಭಟನೆ ನಡೆಯಿತು.
ಪುತ್ತೂರು ʼಅಮರ್ ಜವಾನ್ʼ ಜ್ಯೋತಿ ಬಳಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿದರು. ಈ ಸಂದರ್ಭ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಶ್ವನಾಥ್ ರೈ, ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಆಸ್ತಿಯನ್ನು ದುರ್ಬಳಕೆ ಮಾಡಿದ್ದಾರೆ ಎಂಬ ಆರೋಪದಡಿ ಕಾಂಗ್ರೆಸ್ ನಾಯಕರ ಮೇಲೆ ಹಗೆ ಸಾಧಿಸುವ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಷಾ ಮಾಡುತ್ತಿದ್ದು, ಇದರಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂದರು.
ʼಯಂಗ್ ಇಂಡಿಯಾʼ ಕಂಪನಿಯಲ್ಲಿ ಅವ್ಯವಹಾರವಾಗಿದೆ ಎನ್ನುವ ಬಿಜೆಪಿಗರು, ಪಿ.ಎಂ. ಕೇರ್ ಫಂಡ್ ನಲ್ಲಾದ ಅವ್ಯವಹಾರದ ಬಗ್ಗೆಯೂ ಇ.ಡಿ. ತನಿಖೆಯಾಗಬೇಕೆಂದು ಆಗ್ರಹಿಸಿದರು.
Kshetra Samachara
21/06/2022 12:51 pm