ಮುಲ್ಕಿ: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ನೀರುಮಾರ್ಗ ಪಂಚಾಯತ್ ವ್ಯಾಪ್ತಿಯ ತಾರಿಗುಡ್ಡೆ ಬಿತ್ತು ಪಾದೆಯಲ್ಲಿ ಕುಸಿತ ಕಂಡ ಕಾಂಕ್ರೀಟ್ ರಸ್ತೆ ಸ್ಥಳಕ್ಕೆ ಮಂಗಳೂರು ಉತ್ತರದ ಮಾಜಿ ಶಾಸಕ ಮೊಯಿದ್ದೀನ್ ಬಾವ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ಈ ಸಂದರ್ಭ ಅವರು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿ, ಕೂಡಲೇ ಸಂಪರ್ಕ ರಸ್ತೆ ದುರಸ್ತಿಗೊಳಿಸುವಂತೆ ಒತ್ತಾಯಿಸಿದರು. ಸ್ಥಳೀಯ ಜಿಪಂ ಸದಸ್ಯರಾದ ಮೆಲ್ವಿನ್, ತಾಪಂ ಸದಸ್ಯ ಶ್ರೀಧರ್ ಉಪಸ್ಥಿತರಿದ್ದರು.
ಈ ಕಾಂಕ್ರೀಟ್ ರಸ್ತೆ ಮೊಯಿದ್ದೀನ್ ಬಾವ ಅವರ ಶಾಸಕತ್ವದ ಅವಧಿಯಲ್ಲಿ ಅವರ ಕ್ಷೇತ್ರಾಭಿವೃದ್ಧಿ ನಿಧಿಯಿಂದ 40 ಲಕ್ಷ ರೂ. ಅನುದಾನದಲ್ಲಿ ನಿರ್ಮಾಣಗೊಂಡಿತ್ತು.
Kshetra Samachara
21/09/2020 11:45 am