ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಯು.ಪಿ.ಯಲ್ಲಿ ಲೈಂಗಿಕ ದೌರ್ಜನ್ಯ ಎಸಗಿ ಯುವತಿಯ ಬರ್ಬರ ಕೊಲೆ ಪ್ರಕರಣ: ಯೂತ್ ಕಾಂಗ್ರೆಸ್ ಆಕ್ರೋಶ

ಮಂಗಳೂರು: ಉತ್ತರ ಪ್ರದೇಶದಲ್ಲಿ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಬೆನ್ನು ಮೂಳೆ ಮುರಿದು, ನಾಲಗೆ ಕತ್ತರಿಸಿ ಅಮಾಯಕಳ ಸಾವಿಗೆ ಕಾರಣವಾದ ಘಟನೆ ಹಾಗೂ ಆಕೆಯ ದೇಹವನ್ನು ಅಜ್ಞಾತ ಸ್ಥಳದಲ್ಲಿ ಸುಟ್ಟು ಹಾಕಿದ ಕೃತ್ಯ ಖಂಡಿಸಿ, ದ.ಕ. ಜಿಲ್ಲಾ ಯುವ ಕಾಂಗ್ರೆಸ್ ನಿಂದ ಮೊಂಬತ್ತಿ ಉರಿಸಿ, ಪ್ರತಿಭಟನೆ ನಡೆಯಿತ

ಮಂಗಳೂರು ಮಹಾನಗರ ಪಾಲಿಕೆಯ ಎದುರು ಇರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಈ ಸಂದರ್ಭ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಹೇಯ ಕೃತ್ಯ ನಡೆಸಿದ ಕೊಲೆಗಡುಕರಿಗೆ ಅತಿ ಶೀಘ್ರವಾಗಿ ಮರಣ ದಂಡನೆ ವಿಧಿಸಬೇಕಾಗಿ ರಾಷ್ಟ್ರಪತಿ ಹಾಗೂ ಕೇಂದ್ರ ಸರಕಾರವನ್ನು ಪ್ರತಿಭಟನೆಯಲ್ಲಿ ಒತ್ತಾಯಿಸಲಾಯಿತು.

ಯೂತ್ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Edited By : Nagesh Gaonkar
Kshetra Samachara

Kshetra Samachara

02/10/2020 11:34 am

Cinque Terre

11.15 K

Cinque Terre

1

ಸಂಬಂಧಿತ ಸುದ್ದಿ