ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಜು.12 ,13 ಸಿಎಂ ಮಳೆ ಹಾನಿ ಪ್ರದೇಶಗಳಿಗೆ ಭೇಟಿ , ಉನ್ನತಮಟ್ಟದ ಸಭೆ

ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜುಲೈ 12 ಮತ್ತು 13 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಜು.12ರಂದು ರಾತ್ರಿ 8.30 ಕ್ಕೆ ಉಡುಪಿಗೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ. ಜು.13ರಂದು ಬೆಳಗ್ಗೆ 9 ಗಂಟೆಗೆ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಳೆ ಹಾನಿಗೆ ಸಂಬಂಧಿಸಿದಂತೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸುವರು.

ಬಳಿಕ 10.30 ಕ್ಕೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳಕ್ಕೆ ತೆರಳಿ ಅಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ, ಮಳೆ ಹಾನಿಗೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಲಿದ್ದಾರೆ.

ಅಪರಾಹ್ನ 2.45ಕ್ಕೆ ಭಟ್ಕಳದಿಂದ ರಸ್ತೆ ಮಾರ್ಗವಾಗಿ ಹೊರಟು, ಉಡುಪಿ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳ ವೀಕ್ಷಣೆ ನಡೆಸಲಿದ್ದಾರೆ. ಸಂಜೆ 6 ಗಂಟೆಗೆ ಉಡುಪಿಗೆ ಆಗಮಿಸುವ ಮುಖ್ಯಮಂತ್ರಿಗಳು ಮಂಗಳೂರಿಗೆ ತೆರಳಿ ಅಲ್ಲಿಂದ ವಿಮಾನದಲ್ಲಿ ಬೆಂಗಳೂರಿಗೆ ಪ್ರಯಾಣಿಸುವರು.

Edited By : PublicNext Desk
Kshetra Samachara

Kshetra Samachara

12/07/2022 06:51 am

Cinque Terre

10.76 K

Cinque Terre

1

ಸಂಬಂಧಿತ ಸುದ್ದಿ