ಬಂಟ್ವಾಳ: ಮುಂದಿನ ಮೂರು ವರ್ಷಗಳಲ್ಲಿ ಕೇಂದ್ರ ಸರಕಾರದ ನೆರವಿನಿಂದ ರಾಜ್ಯದ ಎಲ್ಲ ಮನೆಗಳಿಗೂ ಕುಡಿಯುವ ನೀರನ್ನು ತಲುಪಿಸುವ ಕೆಲಸ ಮಾಡಲಿದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಬಂಟ್ವಾಳ ವಿಧಾನಸಭಾ ಕ್ಷೇತ್ರದ 12 ಗ್ರಾಪಂ ವ್ಯಾಪ್ತಿಗೆ ಒಳಪಡುವ 62 ಕೋಟಿ ರೂ. ವೆಚ್ಚದ ಸರಪಾಡಿ ಹಾಗೂ ನರಿಕೊಂಬು ಬಹುಗ್ರಾಮ ಶುದ್ಧ ಕುಡಿಯುವ ನೀರು ಸರಬರಾಜು ಯೋಜನೆಯನ್ನು ಭಾನುವಾರ ಬಂಟ್ವಾಳದಲ್ಲಿ ಉದ್ಘಾಟಿಸಿ ಮಾತನಾಡಿದರು.
ಪ್ರತಿ ಮನೆಗೂ ನೀರು ತಲುಪಬೇಕು ಎಂಬ ಕೇಂದ್ರ ಸರಕಾರದ ಯೋಜನೆಯಾದ "ಮನೆ- ಮನೆಗೆ ಗಂಗೆ" ಪರಿಕಲ್ಪನೆಯಂತೆ ನೀರೊದಗಿಸುವ ಕಾರ್ಯ ಮಾಡಲಾಗುತ್ತಿದೆ. ಹೊಸದಾಗಿ ಮಂಗಳೂರಿಗೆ 140 ಕೋಟಿ ರೂ., ಬಂಟ್ವಾಳ ಕ್ಷೇತ್ರಕ್ಕೆ 60 ಕೋಟಿ ರೂ. ವೆಚ್ಚದ ಕುಡಿಯುವ ನೀರಿನ ಯೋಜನೆ ಕಾಮಗಾರಿಗೆ ಮಂಜೂರಾಗಿದೆ ಎಂದರು.
ದೇಶದ ಪ್ರತಿ ನಾಗರಿಕರಿಗೂ ಶುದ್ಧ ಕುಡಿಯುವ ನೀರು ತುಂಬಾ ಅವಶ್ಯಕವಾಗಿದ್ದು, ಮನೆ-ಮನೆಗೂ ಶುದ್ಧ ಕುಡಿಯುವ ನೀರು ಪೂರೈಕೆಯಾಗಬೇಕು ಎಂದು ಕೆ.ಎಸ್. ಈಶ್ವರಪ್ಪ ಹೇಳಿದರು.
Kshetra Samachara
31/01/2021 07:40 pm