ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಸಾಸ್ತಾನ ಸುಂಕ ವಸೂಲಿ; ಸ್ಥಳೀಯ ವಾಹನಕ್ಕೆ ವಿನಾಯಿತಿ ಕೋರಿ ಸಚಿವರಿಗೆ ಅಹವಾಲು

ಉಡುಪಿ: ರಾಷ್ಟ್ರೀಯ ಹೆದ್ದಾರಿ ಜಾಗೃತಿ ಸಮಿತಿಯು ಸಾರ್ವಜನಿಕರ ಬೆಂಬಲದೊಂದಿಗೆ ಕಳೆದ ಕೆಲವರ್ಷಗಳಿಂದ ರಾಷ್ಟ್ರೀಯ ಹೆದ್ದಾರಿ 66ರ ಅಸಮರ್ಪಕ ಮತ್ತು ಅವೈಜ್ಞಾನಿಕ ಕಾಮಗಾರಿ ಹಾಗೂ ಸ್ಥಳೀಯರಿಗೆ ಶುಲ್ಕ ವಿಧಿಸುವುದನ್ನು ವಿರೋಧಿಸಿ ಹೋರಾಟ ನಡೆಸುತ್ತಾ ಬಂದಿದೆ.

2018 ರಲ್ಲಿ ನಡೆದ ದೊಡ್ಡಮಟ್ಟದ ಹೋರಾಟವನ್ನು ಟೋಲ್ ಗೇಟ್ ಬಳಿ ಹಮ್ಮಿಕೊಂಡಾಗ ಹೋರಾಟದಲ್ಲಿ ಜನಪ್ರತಿನಿಧಿಗಳು ಭಾಗವಹಿಸಿದ್ದರು.

ಜನಪ್ರತಿನಿಧಿಗಳ ಸಮ್ಮುಖದಲ್ಲೇ ಕೋಟ ಜಿಪಂ ವ್ಯಾಪ್ತಿಯ ವಾಹನಗಳಿಗೆ ವಿನಾಯಿತಿ ಘೋಷಣೆ ಮಾಡಲಾಗಿತ್ತು. ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತ ಹಾಗೂ ಅಧಿಕಾರಿಗಳ ಸಮ್ಮುಖದಲ್ಲೇ ತೆಗೆದುಕೊಂಡ ನಿರ್ಣಯ ಜಾರಿಯಲ್ಲಿರುವಂತೆ ಇದೀಗ ಏಕಾಏಕಿ ಫೆಬ್ರವರಿ 15ರಿಂದ ಸ್ಥಳೀಯರು ಕೂಡ ಪಾವತಿಸಬೇಕು, ವಿನಾಯಿತಿಗಳನ್ನು ರದ್ದುಗೊಳಿಸುವ ಬಗ್ಗೆ ಟೂರ್ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಏಕಪಕ್ಷೀಯ ಸಮಿತಿ ಮತ್ತು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳೊಂದಿಗೆ ಚರ್ಚಿಸಿ ಹಿಂದಿನಿಂದ ಸ್ಥಳೀಯರಿಗೆ ಸುಂಕ ವಿನಾಯಿತಿ ವ್ಯವಸ್ಥೆಯನ್ನು ಮುಂದುವರಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕಾಗಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ನೀಡಲಾಯಿತು.

Edited By : Manjunath H D
Kshetra Samachara

Kshetra Samachara

07/02/2021 06:35 pm

Cinque Terre

17.53 K

Cinque Terre

0

ಸಂಬಂಧಿತ ಸುದ್ದಿ