ಉಡುಪಿ: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ದೊಂಬೆ ಗ್ರಾಮದ ಕರಾವಳಿ ಭಾಗದಲ್ಲಿ ಕಡಲ್ಕೊರೆತ ಪ್ರದೇಶಗಳು ಮತ್ತು ಕರಾವಳಿ ತೀರ ಪ್ರದೇಶಗಳಿಗೆ ಇಂದು ಮೀನುಗಾರಿಕೆ ಮತ್ತು ಬಂದರು ಸಚಿವ ಎಸ್. ಅಂಗಾರ ಭೇಟಿ ನೀಡಿದರು.
ಸಮುದ್ರದ ಅಬ್ಬರದ ಅಲೆಗಳು ದಡಕ್ಕೆ ಅಪ್ಪಳಿಸಿ ಜನವಸತಿ ಪ್ರದೇಶಗಳತ್ತ ನುಗ್ಗುತ್ತಿವೆ. ಹೀಗಾಗಿ ಉಡುಪಿ ಜಿಲ್ಲೆಯಲ್ಲಿ ಕಡಲ್ಕೊರೆತ ಹೆಚ್ಚಾಗಿದ್ದು, ಜಿಲ್ಲೆಯ ಹಲವು ಕರಾವಳಿ ಪ್ರದೇಶದ ಸಮುದ್ರ ತೀರಗಳಿಗೆ ಭೇಟಿ ನೀಡಿ ಸೂಕ್ತ ಪರಿಹಾರ ಒದಗಿಸುವ ಭರವಸೆಯನ್ನು ನೊಂದ ಕುಟುಂಬಗಳಿಗೆ ನೀಡಿದರು.
ಈ ಸಂದರ್ಭ ಶಾಸಕ ಸುಕುಮಾರ ಶೆಟ್ಟಿ ಮತ್ತು ಜಿಪಂ ಸದಸ್ಯ ಶಂಕರ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
08/02/2021 03:32 pm