ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ನಾಳೆಯಿಂದ 1 ವಾರ ಕಾಸರಗೋಡಿಗೆ ಬಸ್ ಸಂಚಾರ‌ ಸ್ಥಗಿತ; ನಳಿನ್ ಕುಮಾರ್ ಕಟೀಲು

ಮಂಗಳೂರು: ಕೇರಳ ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯಿಂದ ಕಾಸರಗೋಡಿಗೆ ಸಂಚರಿಸುವ ಸರಕಾರಿ ಹಾಗೂ ಖಾಸಗಿ ಬಸ್‍ಗಳನ್ನು ಆ.1 ರಿಂದ ಒಂದು ವಾರ ಸ್ಥಗಿತಗೊಳಿಸಲಾಗುವುದು ಎಂದು ಸಂಸದ ನಳಿನ್ ಕುಮಾರ್ ಕಟೀಲು ಅವರು ತಿಳಿಸಿದರು.

ದ.ಕ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೆಲವು ದಿನಗಳಿಂದ ದ.ಕ.ಜಿಲ್ಲೆಯಲ್ಲಿಯೂ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು, ಗಡಿಭಾಗದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಸೋಂಕು ಹರಡದಂತೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ಕೇರಳದಿಂದ ಬರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ವರದಿ ಹೊಂದಿರಬೇಕು. ಮುಖ್ಯವಾಗಿ ಈ ಸಮಯದಲ್ಲಿ ವಿದ್ಯಾರ್ಥಿ ನಿಲಯದಲ್ಲಿಯೇ ವಿದ್ಯಾರ್ಥಿಗಳು ಉಳಿಯಬೇಕು. ಪ್ರತಿ ದಿನ ಅವರ ಬಗ್ಗೆ ನಿಗಾ ವಹಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್ ತಪಾಸಣೆಯನ್ನು ಹೆಚ್ಚಳ ಮಾಡುತ್ತಿದ್ದು, ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ ಗಳಿಗೆ ದಾಖಲಿಸಬೇಕು‌. ಅನಗತ್ಯ ಓಡಾಟ ಮಾಡುವ ಸೋಂಕಿತರ ವಿರುದ್ಧ ಎಫ್‍ಐಆರ್ ದಾಖಲಿಸಬೇಕು. ಒಂದೇ ಕುಟುಂಬದಲ್ಲಿ 2 ಕ್ಕಿಂತ ಹೆಚ್ಚು ಕೋವಿಡ್ ಪ್ರಕರಣಗಳು ಕಂಡುಬಂದಲ್ಲಿ ಆ ಮನೆಯನ್ನು ಮೈಕ್ರೋ ಕಂಟೈನ್‍ಮೆಂಟ್ ಜೋನ್ ಎಂದು ಪರಿಗಣಿಸಬೇಕು. ಸಭೆ-ಸಮಾರಂಭಗಳು, ರಾಜಕೀಯ, ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳನ್ನು ಆ.10 ರವರೆಗೆ ನಡೆಸದಂತೆ ಕ್ರಮ ಕೈಗೊಳ್ಳಬೇಕು. ಮದುವೆ ಕೇವಲ 50 ಜನರು ಮಾತ್ರ ಸೀಮಿತಗೊಳಿಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದಲ್ಲಿ ಕಲ್ಯಾಣ ಮಂಟಪಗಳ ಮಾಲಕರ ಮೇಲೆ ಎಫ್ಐಆರ್ ದಾಖಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

Edited By : Nirmala Aralikatti
Kshetra Samachara

Kshetra Samachara

31/07/2021 09:14 pm

Cinque Terre

9.35 K

Cinque Terre

1

ಸಂಬಂಧಿತ ಸುದ್ದಿ