ಬಂಟ್ವಾಳ: ಸುಮಾರು 6 ಕೋಟಿ ರೂ. ವೆಚ್ಚದಲ್ಲಿ ಮಾಣಿಯ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಲಾಗುತ್ತದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹೇಳಿದ್ದಾರೆ.
ಮಾಣಿ ಗ್ರಾಮ ಪಂಚಾಯಿತಿ, ಅಪೋಲೋ ಸ್ಪೆಷಾಲಿಟಿ ಹಾಸ್ಪಿಟಲ್ ಬೆಂಗಳೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಮಾಣಿ, ಕರ್ನಾಟಕ ಪ್ರೌಢಶಾಲೆ ಮಾಣಿ, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಮಾಣಿ, ರೋಟರಿ ಕ್ಲಬ್ ಬಂಟ್ವಾಳ ಸಂಯುಕ್ತ ಆಶ್ರಯದಲ್ಲಿ ಮಾಣಿ ಕರ್ನಾಟಕ ಪ್ರೌಢಶಾಲೆಯಲ್ಲಿ ನಡೆದ ಉಚಿತ ಕೋವಿಡ್ ಲಸಿಕಾ ಶಿಬಿರವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು.
ಮಾಣಿ ಕರ್ನಾಟಕ ಪ್ರೌಡ ಶಾಲಾ ರಸ್ತೆ ಅಭಿವೃದ್ದಿಗೆ 10 ಲಕ್ಷ ರೂ ಅನುದಾನವನ್ನು ನೀಡುವುದಾಗಿ ಇದೇ ವೇಳೆ ಅವರು ಭರವಸೆ ನೀಡಿದರು.
ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾಭಿವರ್ಧಕ ಸಂಘ ಮಾಣಿ ಅಧ್ಯಕ್ಷ ಕಿರಣ್ ಹೆಗ್ಡೆ, ಉಪಾಧ್ಯಕ್ಷ ಮಹಮ್ಮದ್ ಹಬೀಬ್, ಕಾರ್ಯದರ್ಶಿ ಇಬ್ರಾಹಿಂ.ಕೆ.ಮಾಣಿ, ಸ್ಕೌಟ್ ಮತ್ತು ಗೈಡ್ಸ್ ಅಧ್ಯಕ್ಷ ಪ್ರಹ್ಲಾದ ಶೆಟ್ಟಿ ಜಡ್ತಿಲ, ಬಂಟ್ವಾಳ ರೋಟರಿ ಕ್ಲಬ್ ಕಾರ್ಯದರ್ಶಿ ಧನಂಜಯ ಬಾಳಿಗ ಇದ್ದರು.
Kshetra Samachara
02/08/2021 07:35 pm