ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

2.55 ಕೋಟಿ ರೂ. ವೆಚ್ಚದ ಕುಡಿಯುವ ನೀರು ಯೋಜನೆಗೆ ಶಾಸಕ ಭರತ್ ಶೆಟ್ಟಿ ಶಿಲಾನ್ಯಾಸ

ಬಜಪೆ: ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೇಂದ್ರ ಸರ್ಕಾರದ ಜಲಜೀವನ್ ಮಿಶನ್ ಯೋಜನೆ ಅಡಿ 2.55 ಕೋಟಿ ರೂ. ವೆಚ್ಚದ ಯೋಜನೆಗೆ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ.ವೈ ಭರತ್ ಶೆಟ್ಟಿ ಅವರು ಇಂದು ಗುದ್ದಲಿಪೂಜೆ ನೆರವೇರಿಸಿದರು.

ಬಳಿಕ ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕರು ಪರಿಶೀಲಿಸಿ, ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಆಗಲಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಕಂದಾವರ ಗ್ರಾ.ಪಂ ಅಧ್ಯಕ್ಷ ಉಮೇಶ್ ಕುಲಾಲ್, ಮಾಜಿ ಸ್ಥಳೀಯ ತಾಲೂಕು ಪಂಚಾಯತ್ ಸದಸ್ಯವಿಶ್ವನಾಥ ಶೆಟ್ಟಿ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

01/09/2021 09:16 pm

Cinque Terre

6.64 K

Cinque Terre

0

ಸಂಬಂಧಿತ ಸುದ್ದಿ