ಸುರತ್ಕಲ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮನೆ ನಿರ್ಮಿಸಲು ಅತ್ಯಗತ್ಯವಾಗಿರುವ ಮರಳು ದರ ಹೆಚ್ಚಳವಾಗಿದ್ದು, ಜನಸಾಮಾನ್ಯರು ಮನೆ ಕಟ್ಟಲು ಪರದಾಡುತ್ತಿದ್ದಾರೆ. ಆದಷ್ಟು ಬೇಗ ಮರಳು ಟೆಂಡರ್ ಪ್ರಕ್ರಿಯೆಯನ್ನು ಕೈಗೆತ್ತಿಕೊಳ್ಳಬೇಕು ಮತ್ತು ಕೆಂಪು ಕಲ್ಲು ಪರ್ಮಿಟ್ ಸಹಿತ ಸಮಗ್ರ ರೂಪುರೇಶೆ, ನಿಯಮಾವಳಿಗಳನ್ನು ರೂಪಿಸುವ ಅಗತ್ಯದ ಕುರಿತು ವಿಧಾನಸಭಾ ಅಧಿವೇಶನದಲ್ಲಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ವೈ ಭರತ್ ಶೆಟ್ಟಿ ವಿಷಯ ಪ್ರಸ್ತಾಪಿಸಿದರು.
ಈ ಕುರಿತು ಉತ್ತರ ನೀಡಿದ ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಸಚಿವರಾದ ಹಾಲಪ್ಪ ಆಚಾರ್ ಅವರು ಪ್ರಸ್ತಾವನೆಯನ್ನು ಸಚಿವ ಸಂಪುಟಕ್ಕೆ ಕಳುಹಿಸಿಕೊಡಲಾಗಿದ್ದು ಆದಷ್ಟು ಬೇಗ ಈ ವಿಷಯದಲ್ಲಿ ಕರಾವಳಿಯ ನಾಗರಿಕರಿಗೆ ಅನುಕೂಲವಾಗುವ ಹಾಗೆ ನಿಯಮಾವಳಿಗಳನ್ನು ರೂಪಿಸಿ ಜಾರಿಗೆ ತರಲಾಗುವುದು ಎಂದು ತಿಳಿಸಿದರು.
Kshetra Samachara
24/09/2021 06:11 pm