ಮುಲ್ಕಿ: ಮುಲ್ಕಿ ತಾಲೂಕು ವ್ಯಾಪ್ತಿಯಲ್ಲಿ ಅಕ್ರಮ ಮರಳುಗಾರಿಕೆ ಎಗ್ಗಿಲ್ಲದೆ ನಡೆಯುತ್ತಿದ್ದು ಕೂಡಲೇ ಸಂಬಂಧಪಟ್ಟ ಆಡಳಿತ ಕ್ರಮಕೈಗೊಳ್ಳದಿದ್ದರೆ ಪಕ್ಷಬೇಧ ಮರೆತು ತೀವ್ರ ಹೋರಾಟ ನಡೆಸಲಾಗುವುದು ಎಂದು ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್ ಹಳೆಯಂಗಡಿಯ ಮುಲ್ಕಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಅವರು ಮಾಧ್ಯಮದೊಂದಿಗೆ ಮಾತನಾಡಿ ಸರಕಾರದಿಂದ ಮರಳುಗಾರಿಕೆಗೆ ನೀಡಿರುವ ಪರವಾನಿಗೆ ಸೆ.15ಕ್ಕೆ ಮುಗಿದಿದ್ದರೂ ಮುಲ್ಕಿ ತಾಲೂಕು ವ್ಯಾಪ್ತಿಯಲ್ಲಿ ಎಗ್ಗಿಲ್ಲದೆ ಅನಧಿಕೃತ ಮರಳುಗಾರಿಕೆ ನಡೆಯುತ್ತಿದ್ದು ಅತಿಕಾರಿಬೆಟ್ಟು ಗ್ರಾಮಪಂಚಾಯತ್ ವ್ಯಾಪ್ತಿಯ ಮಟ್ಟು ಸಹಿತ ಅನೇಕ ಗ್ರಾಮೀಣ ಭಾಗದ ರಸ್ತೆಗಳು, ಸೇತುವೆಗಳು ಕೆಟ್ಟುಹೋಗಿದ್ದು ಸಂಚರಿಸಲು ದುಸ್ತರವಾಗಿದೆ.
ಕೆಟ್ಟುಹೋದ ರಸ್ತೆಯಲ್ಲಿ ಆಟೋ ಸಹಿತ ಯಾವುದೇ ವಾಹನಗಳು ಬರಲು ನಿರಾಕರಿಸುತ್ತಿದ್ದು ಗ್ರಾಮ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ.
ಅಕ್ರಮ ಮರಳುಗಾರಿಕೆ ಬಗ್ಗೆ ಮುಲ್ಕಿ ತಹಶಿಲ್ದಾರ್, ಮಂಗಳೂರು ಎಸಿಪಿ ಮಹೇಶ್ ಕುಮಾರ್ ಹಾಗೂ ಸ್ಥಳೀಯ ಗ್ರಾಮ ಪಂಚಾಯತ್ ಗಳಿಗೆ ದೂರು ನೀಡಿಡಿದ್ದರೂ ಇದುವರೆಗೂ ನಿಲ್ಲಿಸಿಲ್ಲ.
ಮುಂದಿನ ಮೂರು ದಿನಗಳಲ್ಲಿ ಮರಳುಗಾರಿಕೆ ನಿಲ್ಲಿಸದಿದ್ದರೆ ತಹಶೀಲ್ದಾರ್ ಕಚೇರಿ ಎದುರು ಧರಣಿ ಹಾಗೂ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದರು.ಕೆಪಿಸಿಸಿ ಕೋ-ಆರ್ಡಿನೇಟರ್ ವಸಂತ್ ಬೆರ್ನಾಡ್ ಮಾತನಾಡಿ ಕೆಲ ಮರಳು ಮಾಫಿಯಾ ದಂಧೆಕೋರರು ಪರಸ್ಪರ ಹೊಂದಾಣಿಕೆ ಮಾಡಿಕೊಂಡು ತಾಲೂಕು ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದು ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರ, ಕಾಂಗ್ರೆಸ್ ನಾಯಕರಾದ ಯೋಗೀಶ್ ಕೋಟ್ಯಾನ್, ಪದ್ಮಾವತಿ ಶೆಟ್ಟಿ, ಮಂಜುನಾಥ ಕಂಬಾರ, ಧನರಾಜ ಕೋಟ್ಯಾನ್ ಸಸಿಹಿತ್ಲು, ಮಿರ್ಜಾ ಅಹಮದ್ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
29/09/2021 01:25 pm