ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುರತ್ಕಲ್: ಸರಕಾರಿ ನರ್ಮ್ ಬಸ್ ಸಂಚಾರಕ್ಕೆ ಚಾಲನೆ

ಸುರತ್ಕಲ್: ಸುರತ್ಕಲ್ ಸಮೀಪದ ಮಧ್ಯ ಶ್ರೀ ಖಡ್ಗೇಶ್ವರಿ ದೇವಸ್ಥಾನದಿಂದ ಮಂಗಳೂರಿಗೆ (ಸ್ಟೇಟ್ ಬ್ಯಾಂಕ್) ಸರಕಾರಿ ನರ್ಮ್ ಬಸ್ ಸಂಚಾರಕ್ಕೆ ಶಾಸಕ ಉಮಾನಾಥ ಕೋಟ್ಯಾನ್ ಇಂದು ಹಸಿರು ನಿಶಾನೆ ತೋರಿದರು.

ಬಳಿಕ ಮಾತನಾಡಿದ ಅವರು, ಜನರ ಹಲವಾರು ವರ್ಷಗಳ ಬೇಡಿಕೆಯಾದ ಸರಕಾರಿ ಬಸ್ ಓಡಾಟದ ಕನಸು ನನಸಾಗಿದೆ. ಜನರು ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಸುವ ಮೂಲಕ ಸರಕಾರಿ ಬಸ್ ನಿರಂತರವಾಗಿ ಓಡಾಟ ನಡೆಸುವಂತೆ ನೋಡಿಕೊಳ್ಳಬೇಕು. ದೇವಸ್ಥಾನಕ್ಕೆ ಬರುವ ರಸ್ತೆ ಕಾಂಕ್ರೀಟ್ ಮತ್ತು ಅಗಲೀಕರಣಕ್ಕೆ ಈಗಾಗಲೇ ಪ್ರಧಾನ ಮಂತ್ರಿ ಗ್ರಾಮೀಣ ಸಡಕ್ ಯೋಜನೆಯಲ್ಲಿ ನಿರ್ಮಾಣ ಮಾಡಲು ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅನುದಾನ ಬಿಡುಗಡೆಯಾದ ಕೂಡಲೇ ಕಾಮಗಾರಿ ಪ್ರಾರಂಭಿಸಲಾಗುವುದು ಎಂದರು.

ಮುಖ್ಯ ಅತಿಥಿಗಳಾಗಿ ಮಂಗಳೂರು ನಾಗರಿಕ ಸಮಿತಿ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ, ತಾಲ್ಲೂಕು ಪಂಚಾಯತ್ ಮಾಜಿ ಸದಸ್ಯೆ ವಜ್ರಾಕ್ಷಿ ಶೆಟ್ಟಿ, ಚೇಳೈರು ಗ್ರಾ.ಪಂ ಅಧ್ಯಕ್ಷೆ ಯಶೋದಾ, ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಅಭಿವೃದ್ಧಿ ಅಧಿಕಾರಿ ನಿತ್ಯಾನಂದ, ಮಾಜಿ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

09/10/2021 03:31 pm

Cinque Terre

3.12 K

Cinque Terre

0

ಸಂಬಂಧಿತ ಸುದ್ದಿ