ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಆಗ್ರಹಿಸಿ ವಿಪಕ್ಷ ಕಾಂಗ್ರೆಸ್ ನಿಂದ ಪ್ರತಿಭಟನೆ

ಕಾರ್ಕಳ : ಕಾರ್ಕಳ ನಗರದಲ್ಲಿ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು ಸಂಚರಿಸಲು ಸಾಧ್ಯವೇ ಇಲ್ಲದ ಪರಿಸ್ಥಿತಿ ನಿರ್ಮಾಣಗೊಂಡಿದೆ. ಈ ಸಂಬಂಧ ಪ್ರತಿಭಟನೆಗಳೂ ನಡೆಯುತ್ತಿವೆ. ಇದರ ಮುಂದುವರೆದ ಭಾಗವಾಗಿ ಪುರಸಭಾ ಮುಖ್ಯ ರಸ್ತೆಯಲ್ಲಿರುವ ಗುಂಡಿಗಳನ್ನು ಮುಚ್ಚುವಂತೆ ಆಗ್ರಹಿಸಿ ವಿಪಕ್ಷ ಕಾಂಗ್ರೆಸ್ ನ ಸದಸ್ಯರು ವಿಪಕ್ಷ ಮುಖಂಡ ಅಶ್ಪಾಕ್ ಅಹ್ಮದ್ ಅವರ‌ ನೇತೃತ್ವದಲ್ಲಿ ಸದನ ಬಾವಿಗಿಳಿದು ಪ್ರತಿಭಟನೆ ನಡೆಸಿದರು.

ಒಳಚರಂಡಿ ಕಾಮಗಾರಿ ಅವೈಜ್ಞಾನಿಕ ರೀತಿಯಲ್ಲಿ ನಡೆಸಿರುವುದರಿಂದ ರಸ್ತೆಗಳು ಗುಂಡಿಗಳಿಂದ ತುಂಬಿ ಹೋಗಿವೆ.ಈ ಬಗ್ಗೆ ಹಲವಾರು ಬಾರಿ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಇದನ್ನು ಸರಿಪಡಿಸುವವರೆಗೆ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದರು.

ಪುರಸಭೆಯ ವಿಪಕ್ಷ ಸದಸ್ಯ ಶುಭದ ರಾವ್ ಮಾತನಾಡಿ, ಗುಂಡಿಗಳಿಂದಾಗಿ ಯಾವುದೇ ವಾಹನಗಳು ಸಂಚರಿಸಲು ಸಾಧ್ಯವೇ ಇಲ್ಲದಾಗಿದೆ. ಕಾರ್ಕಳದ ಮುಖ್ಯರಸ್ತೆ, ಮಣ್ಣಗೋಪುರ, ಮೂರು ಮಾರ್ಗ , ಮಂಗಳೂರು ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಕೂಡಲೇ ಸರಿಪಡಿಸಬೇಕು ಎಂದು ಆಗ್ರಹಿಸಿದರು.

Edited By :
Kshetra Samachara

Kshetra Samachara

26/10/2021 12:19 pm

Cinque Terre

18.38 K

Cinque Terre

0

ಸಂಬಂಧಿತ ಸುದ್ದಿ