ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಎಕ್ಕಾರು: ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿಪೂಜೆ

ಬಜಪೆ: ಎಕ್ಕಾರು ಶ್ರೀಕೊಡಮಣೆತ್ತಾಯ ದೈವಸ್ಥಾನಕ್ಕೆ ಸಂಪರ್ಕಿಸುವ ರಸ್ತೆಯ ಕಾಂಕ್ರೀಟಿಕರಣ, ದೈವಸ್ಥಾನದ ಬಳಿಯಲ್ಲಿ ವಾಹನ ನಿಲುಗಡೆ ಹಾಗೂ ಶಾಶ್ವತ ತಡೆಗೋಡೆ ನಿರ್ಮಾಣಕ್ಕಾಗಿ ಲೋಕೋಪಯೋಗಿ ಇಲಾಖೆಯಿಂದ ಸುಮಾರು 3 ಕೋಟಿ ರೂ. ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನಡೆಯಿತು.

ಈ ಸಂದರ್ಭ ಮೂಲ್ಕಿ ಮೂಡಬಿದಿರೆ ವಿಧಾನ ಸಭಾ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್, ಎಕ್ಕಾರು ಗೋಪಾಲಕೃಷ್ಣ ಮಠದ ವೇದಮೂರ್ತಿ ಹರಿದಾಸ ಉಡುಪ, ಎಕ್ಕಾರು ಶ್ರೀ ಕೊಡಮಣೆತ್ತಾಯ ದೈವಸ್ಥಾನದ ಆಡಳಿತ ಮೊಕ್ತೇಸರ ನಿತಿನ್ ಹೆಗ್ಡೆ ಕಾವರ (ತಿಮ್ಮ ಕಾವ), ಡಾ ಪದ್ಮನಾಭ ಭಟ್ ಎಕ್ಕಾರು,ಎಕ್ಕಾರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಸುರೇಖಾ ರೈ,ಸದಸ್ಯರಾದ ಸುದೀಪ್ ಅಮೀನ್,ವಿಕ್ರಂ ಮಾಡ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

17/11/2021 01:06 pm

Cinque Terre

3.94 K

Cinque Terre

0