ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಿನ್ನಿಗೋಳಿ ಪಟ್ಟಣ ಪಂಚಾಯತಿ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್: ಉಮಾನಾಥ್ ಕೋಟ್ಯಾನ್

ಮುಲ್ಕಿ: ಕಿನ್ನಿಗೋಳಿ ಪಟ್ಟಣ ಪಂಚಾಯಿತಿಗೆ ನಗರೋತ್ತಾನದಿಂದ ಐದು ಕೋಟಿ ರೂ. ಬಿಡುಗಡೆಯಾಗಿದ್ದು ಮುಂದಿನ ದಿನಗಳಲ್ಲಿ ಕೃಷಿ ಸಹಿತ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಯೋಜನೆಗೆ ಮಾಸ್ಟರ್ ಪ್ಲಾನ್ ರೂಪಿಸಲಾಗುವುದು ಎಂದು ಶಾಸಕರಾದ ಉಮಾನಾಥ್ ಕೋಟ್ಯಾನ್ ಹೇಳಿದರು.

ಕಿನ್ನಿಗೋಳಿ ಪಟ್ಟಣ ಪಂಚಾಯತ್ ಘನತ್ಯಾಜ್ಯ ಘಟಕದಿಂದ ತಯಾರಿಸಿದ ಸಾವಯವ ರಸಗೊಬ್ಬರ ಬಿಡುಗಡೆ "ಕಿನ್ನಿಗೋಳಿ ಗೋಲ್ಡ್" ಮತ್ತು ಪೌರಾಡಳಿತ ನಿರ್ದೇಶನಾಲಯ ರೂಪಿಸಿರುವ ಕಿನ್ನಿಗೋಳಿ ಪಟ್ಟಣ ಪಂಚಾಯತಿ ವೆಬ್ ಸೈಟ್ ಬಿಡುಗಡೆ ಮಾಡಿ ಮಾತನಾಡಿದರು.

ಈ ಸಂದರ್ಭ ಹಿಂದಿನ ಕಿನ್ನಿಗೋಳಿ,ಕಟೀಲು ಹಾಗೂ ಮೆನ್ನಬೆಟ್ಟು ಗ್ರಾ .ಪಂ. ಅಧ್ಯಕ್ಷರಾದ ಫಿಲೋಮಿನಾ ಸಿಕ್ವೇರಾ, ಗೀತಾ, ಸರೋಜಿನಿ ರವರನ್ನು ಸಾಧಕರ ನೆಲೆಯಲ್ಲಿ ಗೌರವಿಸಲಾಯಿತು.

Edited By : Nirmala Aralikatti
Kshetra Samachara

Kshetra Samachara

10/01/2022 04:04 pm

Cinque Terre

5.78 K

Cinque Terre

0

ಸಂಬಂಧಿತ ಸುದ್ದಿ